ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ : 28,204 ಹೊಸ ಕೇಸ್ ದಾಖಲು!

ದೇಶದಲ್ಲಿ ನಿತ್ಯ 40 ಸಾವಿರ ಗಡಿ ದಾಟುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ 24 ಗಂಟೆಯಲ್ಲಿ ಇಳಿಕೆಯಾಗಿದೆ. ದೇಶದಲ್ಲಿ ಹೊಸದಾಗಿ 28,204 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಜೊತೆಗೆ 147 ದಿನಗಳಲ್ಲಿ ಕಡಿಮೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಭಾರತವು 28,204 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಇದು 147 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಮಾಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ. 28,204 ಹೊಸ ಕೋವಿಡ್ -19 ಪ್ರಕರಣಗಳ ಪೈಕಿ ಕೇರಳದಲ್ಲಿ 13,049 ಪ್ರಕರಣಗಳು, ಮಹಾರಾಷ್ಟ್ರ 4,505, ತಮಿಳುನಾಡು 1,929, ಆಂಧ್ರ ಪ್ರದೇಶ 1,413 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 1,186 ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದಾಗಿ 373 ಜನ ಬಲಿಯಾಗಿದ್ದು ಸಾವಿನ ಸಂಖ್ಯೆ 4,28,628ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಕೋವಿಡ್ -19 ನಿಂದ ( 105) ಗರಿಷ್ಠ ಸಾವು ಸಂಬಂವಿಸಿದ್ದು, ಮಹಾರಾಷ್ಟ್ರದಲ್ಲಿ 68 ದೈನಂದಿನ ಸಾವುಗಳು ಸಂಭವಿಸಿವೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 3,88,508 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 41,511 ಕೋವಿಡ್ -19 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು  3,11,80,968 ಜನ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 54,91,647 ಡೋಸ್‌ಗಳನ್ನು ನೀಡಲಾಗಿದ್ದು, ಈವರೆಗೆ ಒಟ್ಟು 51,45,00,268 ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 15,11,313 ಮಾದರಿಗಳನ್ನು ಪರೀಕ್ಷಿಸಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights