ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು; ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧ!

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ನೀಡಿರುವ ಸುಪ್ರೀಂಕೋರ್ಟ್, ಜಾಮೀನು ಅವಧಿಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಿದೆ.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ಅಜಯ್ ರಸ್ತೋಗಿ ಅವರಿದ್ದ ಪೀಠವು, “ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಓಡಾಡುವಂತಿಲ್ಲ. ವಾರದಲ್ಲಿ ಎರಡು ಬಾರಿ ಸಿಬಿಐ ಎಸಿಪಿ ಕಚೇರಿಯ ಮುಂದೆ ಹಾಜರಾಗಬೇಕು. ಈ ವೇಳೆ, ಸಾಕ್ಷಿಗಳಿಗೆ ಬೆದರಿಕೆ ಹಾಕಿದರೆ ಜಾಮೀನು ರದ್ದುಪಡಿಸಲಾಗುವುದು” ಎಂದು ಎಚ್ಚರಿಕೆಯನ್ನು ನೀಡಿದೆ.

ವಿನಯ್‌ ಕುಲಕರ್ಣಿ ಪರ ವಕೀಲರು, ಪ್ರಕರಣ ಹೈಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಇದೆ ಎಂದು ಸುಪ್ರೀಂ ಕೋರ್ಟ್‌ ಗಮನಕ್ಕೆ ತಂದಿದ್ದು, ಹೈಕೋರ್ಟ್ ಎರಡು ತಿಂಗಳೊಳಗೆ ಪ್ರಕರಣದ ವಿಚಾರಣೆ ನಡೆಸಬೇಕು ಎಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಹೊಡೆದಾಟವೂ ಆಗಬಹುದು; ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ಕೊಟ್ಟ ಶರಣ್‌ ಪಂಪ್‌ವೆಲ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights