50 ಅಡಿ ಬಾವಿಯಿಂದ ಮಹಿಳೆ ರಕ್ಷಣೆ : ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಾಚರಣೆ ಮೆಚ್ಚಿದ ಜನ!

ಕೇರಳದಲ್ಲಿ 50 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

50 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳವಾರ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದರು.  ಕೂಡಲೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿದ್ದಾರೆ.

ಸ್ಥಳೀಯ ನಿವಾಸಿಗಳ ಸಹಾಯದಿಂದ ಹಗ್ಗ ಕಟ್ಟಿ ಬಾವಿಗೆ ಬಿಟ್ಟ ಸಿಬ್ಬಂದಿಗಳು ಮಹಿಳೆಯನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವೀಡಿಯೋವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ.

ಮಾತ್ರವಲ್ಲದೇ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಬಾವಿಗೆ ಬಲೆ ಎಸೆದು ಅಗ್ನಿಶಾಮಕ ಸಿಬ್ಬಂದಿ ಕಾಪಾಡುವುದನ್ನು ಜನ ಮೆಚ್ಚಿಕೊಂಡಿದ್ದಾರೆ.

ವೀಡಿಯೊವನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 7,800 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ, ಹಲವಾರು ಬಳಕೆದಾರರು ತಂಡವನ್ನು ಹೊಗಳಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights