ಭೀಕರ ಅಪಘಾತ : ಟ್ರಕ್‌ಗೆ ಕಾರ್ ಡಿಕ್ಕಿ : ಐವರು ಮೃತ – ಓರ್ವನ ಸ್ಥಿತಿ ಗಂಭೀರ!
ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ.
ಉತ್ತರಪ್ರದೇಶದ ಬಸ್ತಿ ಜಿಲ್ಲೆ ರಾಷ್ಟ್ರೀಯ ಹೆದ್ದಾರಿಯ ಪುರೈನಾ ಕ್ರಾಸಿಂಗ್‌ನಲ್ಲಿ ಇಂದು ಮುಂಜಾನೆ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಐವರು ಕುಟುಂಬಸ್ಥರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಬದುಕುಳಿದಿದ್ದು. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ಲಖನೌದಿಂದ ಈ ಕುಟುಂಬ ಜಾರ್ಖಂಡ್‌ಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕಂಟೇನರ್ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಾಗ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು. ಅಪಘಾತದ ದೃಶ್ಯದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಟ್ರಕ್‌ನ ಕೆಳಗೆ ಕಾರ ಹೊಕ್ಕಿದ್ದು ಕ್ರೇನ್ ಬಳಸಿ ಕಾರನ್ನು ರಕ್ಷಣಾ ಅಧಿಕಾರಿಗಳು ಹೊರತೆಗೆದಿದ್ದಾರೆ.
ಕಾರಿನಲ್ಲಿ ಏಳು ಜನರಿದ್ದರು. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು, ಚಾಲಕ ಮತ್ತು ಚಿಕ್ಕ ಹುಡುಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹುಡುಗಿ ಸುರಕ್ಷಿತವಾಗಿದ್ದಾಳೆ ಆದರೆ ಚಾಲಕನ ಸ್ಥಿತಿ ಗಂಭೀರವಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾವಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.