ರಾಜ್ಯದಲ್ಲಿ ಕಾಂಗ್ರೆಸ್ ನವರು ನೆಹರು ಹುಕ್ಕಾಬಾರ್ ತೆರೆಯಲಿ – ಸಿಟಿ ರವಿ ವಿವಾದಾತ್ಮಕ ಹೇಳಿಕೆ!

ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಿ ನೆಹರು ಹುಕ್ಕಾಬಾರ್ ತೆರೆಯಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ ಎಂದು ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಇಂದು ಬಿಜೆಪಿ ಕಚೇರಿಯಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಟಿ ರವಿ ಅವರು,”ಕಾಂಗ್ರೆಸ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ” ಎಂದು ಹೇಳಿದರು.

ನೆಹರು, ಇಂದಿರಾ ಗಾಂಧಿಯವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದರೆ ಅವರು ಮಾಡಿದ್ದ ಎಲ್ಲವನ್ನೂ ಒಪ್ಪಿಕೊಳ್ಳುವುದಕ್ಕೆ ನಾವೇನು ಗುಲಾಮರಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

ನಮ್ಮ ರಾಜಕೀಯ ವಿರೋಧಿಗಳು ಹಳೆಯ ಗ್ರಾಮಾಫೋನ್ ಪ್ಲೇಟ್ ತಿರುಗಿಸುತ್ತಲೇ ಇರ್ತಾರೆ. ಅದರಲ್ಲಿ ಒಬ್ಬರು ಸಿದ್ದರಾಮಯ್ಯ. ಸಿದ್ದರಾಮಯ್ಯರು ಅಪ್ ಡೇಟ್ ಆಗಬೇಕು. ನಾವು ಅಂಬೇಡ್ಕರ್ ವಿರೋಧಿ ಅಲ್ಲ. ಅಂಬೇಡ್ಕರ್ ರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್. ನಿಮ್ಮ ಸಾಫ್ಟ್ ವೇರ್ ಅಪ್ ಡೇಟ್ ಮಾಡ್ಕೊಳ್ಳಿ. ಕಳೆದ ಏಳು ವರ್ಷಗಳಿಂದ ಹಿಂದುಳಿದ ವರ್ಗದವರೇ ಪ್ರಧಾನಿಯಾದವರು. ಕಾಂಗ್ರೆಸ್ ಕಲಾಂರನ್ನು ಎರಡನೇ ಅವಧಿಗೆ ರಾಷ್ಟ್ರಪತಿ ಮಾಡಿಲ್ಲ. ಮೋದಿ ಸಂಪುಟದಲ್ಲಿ 27 ಒಬಿಸಿ ವರ್ಗಕ್ಕೆ ಸೇರಿದವರಿಗೆ ಸಚಿವ ಸ್ಥಾನ ಸಿಕ್ಕಿದೆ, ಪ್ರಾದೇಶಿಕ ನ್ಯಾಯವೂ ಸಿಕ್ಕಿದೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸಂಸತ್ತಿನಲ್ಲಿ ಕಾಂಗ್ರೆಸ್ ವಿಪಕ್ಷಗಳ ಅಸಹಾಕಾರದ ನಡುವೆಯೂ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಮಡಿದೆ. 671 ಒಬಿಸಿ ಸಮುದಾಯಗಳು ನ್ಯಾಯ ಪಡೆಯಲು ಸಾಧ್ಯವಾಗಲಿದೆ. ಮೀಸಲಾತಿ ಸಾಮಾಜಿಕ ನ್ಯಾಯ ಬಿಜೆಪಿಯ ಬದ್ಧತೆಯಾಗಿದ್ದು, ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಸಂಸತ್ತನ್ನು ಖಾನ್ ಮಾರ್ಕೇಟ್ ಆಗಿ ಪರಿವರ್ತಿಸಿದ್ದವರು ಕಾಂಗ್ರೆಸ್ ನವರು ಎಂದು ದೂರಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights