ಕರುನಾಡಿಗೆ ಕೊರೊನಾ ಮೂರನೇ ಅಲೆಯ ಭೀತಿ : ಬೆಂಗಳೂರು ಲಾಕ್..?

ಕರುನಾಡಿಗೆ ಕೊರೊನಾ ಮೂರನೇ ಅಲೆಯ ಭೀತಿ ಹೆಚ್ಚಾಗಿದ್ದು ಮತ್ತೆ ಬೆಂಗಳೂರು ಲಾಕ್ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.

ಹೌದು.. ದೇಶದಲ್ಲಿ ಕೊರೊನಾ ಏರಿಳಿಕೆಯಾಗುತ್ತಿದ್ದು ಭಾರೀ ಆತಂಕವನ್ನುಂಟು ಮಾಡಿದೆ. ಅಲ್ಲಲ್ಲಿ ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಸರ್ಕಾರ ತಜ್ಞರ ಸಲಹೆಯಂತೆ ರಾಜ್ಯ ರಾಜ್ಯಧಾನಿ ಬೆಂಗಳೂರು ಲಾಕ್ ಮಾಡುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಒಂದು ವರೆ ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಇನ್ನೂ ಸಿಲಿಕಾನ್ ಸಿಟಿಯಲ್ಲಿ ನಿತ್ಯ ನಾಲ್ಕುನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಒಂದುವೇಳೆ 400 ಆಸು ಪಾಸು ಇರುವ ಕೊರೊನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದರೆ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಿಲು ಸರ್ಕಾರ ಚಿಂತನೆ ನಡೆಸಿದೆ. ಹೀಗಾಗಿ ಆಗಸ್ಟ್ 15 ನಂತರ ವೀಕೆಂಡ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಕೇಸ್ ಬಂದರೆ ಲಾಕ್ ಡೌನ್ ಪಕ್ಕ ಎನ್ನಲಾಗುತ್ತಿದೆ.

ಬೆಂಗಳೂರಿನಲ್ಲಿ ನಿತ್ಯ 1 ಸಾವಿರ ಜನರಿಗೆ ಸೋಂಕು ಹರಡಿದರೆ ಆಗಸ್ಟ್ ಅಂತ್ಯಕ್ಕೆ ಕಂಪ್ಲೀಟ್ ಲಾಕ್ ಪಕ್ಕ ಎನ್ನಲಾಗುತ್ತಿದೆ. ಇನ್ನೂ ತಜ್ಞರು ಕೊರೊನಾ ಹೆಚ್ಚಾಗುವ ಪ್ರದೇಶಗಳಲ್ಲಿ ಬಾರ್, ಪಬ್, ದೇವಸ್ಥಾನ ಬಂದ್ ಮಾಡಲು ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಕೊರೊನಾ ಚೈನ್ ಕಟ್ ಮಾಡಲು ಸರ್ಕಾರ ಚಿಂತಿಸಿದೆ.

ಒಟ್ಟಿನಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಪೋಷಕರ ನಿದ್ದೆಗೆಡಿಸಿದೆ. ಸರ್ಕಾರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಲಾಕ್ ಡೌನ್ ಮಾಡುವ ಮೂಲಕ ಕೊರೊನಾ ಹರಡದಂತೆ ಈಗಿನಿಂದಲೇ ಕಠಿಣ ನಿಯಮಗಳ ಬಗ್ಗೆ ಚರ್ಚೆ ನಡೆಸಿದೆ. ಅದಾಗಲೇ ರಾಜ್ಯದಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6ರ ವರೆಗೂ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights