ದೇಶದಲ್ಲಿ ಕೊರೊನಾ ಏರಿಳಿಕೆ : 41,195 ಹೊಸ ಕೇಸ್ ಪತ್ತೆ – 490 ಜನ ಬಲಿ!

ದೇಶದಲ್ಲಿ ಕೊರೊನಾ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 41,195 ಹೊಸ ಪ್ರಕರಣಗಳು ದಾಖಲಾಗಿವೆ. 490 ಜನ ಮಹಾಮಾರಿ ಕೊರೊನಾಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳಿಂದ ತಿಳಿದು ಬಂದಿದೆ.

ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,86,351 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 40,013 ರೋಗಿಗಳು ಚೇತರಿಸಿಕೊಂಡಿದ್ದು ದೇಶಾದ್ಯಂತ ಒಟ್ಟು 3,12,20,981 ಜನ ಗುಣಮುಖರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ ಇಲ್ಲಿಯವರೆಗೆ 4 ಲಕ್ಷದ 29 ಸಾವಿರದ 669ಕ್ಕೆ ಏರಿಕೆಯಾಗಿದೆ.

41,195 ಹೊಸ ಪ್ರಕರಣಗಳ ಪೈಕಿ ಕೇರಳದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ 23,500 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 5,560 ಪ್ರಕರಣಗಳು, ತಮಿಳುನಾಡು 1,964, ಆಂಧ್ರಪ್ರದೇಶದಲ್ಲಿ 1,869 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 1,826 ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ (163) ಕೋವಿಡ್ -19 ನಿಂದ ಗರಿಷ್ಠ ಸಾವುಗಳು ವರದಿಯಾಗಿದ್ದು, ಕೇರಳದಲ್ಲಿ 116 ದೈನಂದಿನ ಸಾವುಗಳು ಸಂಭವಿಸಿವೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 41,38,646 ಡೋಸ್‌ಗಳನ್ನು ನೀಡಿದ್ದು, ಒಟ್ಟು 51,90,80,524 ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 21,24,953 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ 18ರಿಂದ 44 ವರ್ಷ ವಯಸ್ಸಿನವರಲ್ಲಿ 1 ಕೋಟಿಗೂ ಹೆಚ್ಚು ಕೋವಿಡ್ -19 ಲಸಿಕೆಯನ್ನು ನೀಡಲಾಗಿದೆ. ಅಲ್ಲದೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ 18-44 ವರ್ಷ ವಯಸ್ಸಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮೊದಲ ಡೋಸ್‌ಗೆ ಲಸಿಕೆ ಹಾಕಿದ್ದಾರೆ.

Spread the love

Leave a Reply

Your email address will not be published. Required fields are marked *