ಕಾರಿನೊಳಗೆ ಪ್ರೇಮಿಗಳು ಆತ್ಮಹತ್ಯೆ : ಸುಟ್ಟು ಕರಕಲಾದ ವಾಹನ : ಮೃತದೇಹ ಕಂಡು ಜನ ಶಾಕ್..!
ಕಾರಿನೊಳಗೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಮಾಂಬಳ್ಳಿ ಗ್ರಾಮದ ಕಾಂಚನ (20) ಹಾಗೂ ಶ್ರೀನಿವಾಸ್ (23) ಎಂದು ಗುರುತಿಸಲಾಗಿದೆ. ಮಾಂಬಳ್ಳಿ-ಕಿನಕಹಳ್ಳಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.
ಮೃತ ದುರ್ದೈವಿಗಳು ಕಳೆದ ಹಲವು ವರ್ಷಗಳಿಂದಲೂ ಇವರಿಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಶ್ರೀನಿವಾಸ್ ಡ್ರೈವರ್ ಆಗಿದ್ದರು ಎನ್ನಲಾಗಿದೆ.
ಇವರಿಬ್ಬರೂ ಇಂಡಿಕಾ ಕಾರಿನಲ್ಲಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರ ತಂಡ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.
ಆದರೆ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.