ಇಂದು ದೇಶ ವಿಭಜನೆಯ ಕರಾಳ ದಿನವೆಂದು ಪಿಎಂ ಮೋದಿ ಟ್ವೀಟ್…!

ದೇಶ ವಿಭಜನೆ ಘಟನೆ ನೆನೆದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಆಗಸ್ಟ್​ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಿಬೇಕು ಎಂದು ಮೋದಿಯವರು ಶನಿವಾರ ಹೇಳಿದ್ದಾರೆ.

‘ದೇಶದ ವಿಭಜನೆಯ ನೋವನ್ನು ಎಂದಿಗೂ ಮರೆಯಲಾಗದು. ದ್ವೇಷ ಮತ್ತು ಹಿಂಸಾಚಾರದಿಂದಾಗಿ ನಮ್ಮ ಲಕ್ಷಾಂತರ ಸಹೋದರ ಸಹೋದರಿಯರು ಸ್ಥಳಾಂತರಗೊಂಡಿದ್ದರು. ಅನೇಕರು ಪ್ರಾಣ ಕಳೆದುಕೊಂಡಿದ್ದರು. ನಮ್ಮ ಜನರು ಪಟ್ಟ ಪಾಡುಗಳು ಮತ್ತು ತ್ಯಾಗದ ನೆನಪಿಗಾಗಿ ಆಗಸ್ಟ್ 14 ಅನ್ನು ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಪರಿಗಣಿಸಲಾಗುವುದು’ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೂಲಕ ಹೇಳಿದ್ದಾರೆ.

‘ವಿಭಜನೆಯ ಕರಾಳ ನೆನಪಿನ ದಿನ’ವು ಸಾಮಾಜಿಕ ವಿಭಜನೆ, ಅಸಾಮರಸ್ಯದ ವಿಷವನ್ನು ತೆಗೆದುಹಾಕುವ ಅಗತ್ಯವನ್ನು ನೆನಪಿಸುತ್ತದೆ. ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಆಶಿಸಿದ್ದಾರೆ.

ಪಾಕಿಸ್ತಾನವನ್ನು 14 ಆಗಸ್ಟ್ 1947 ರಂದು ಮತ್ತು ಭಾರತವನ್ನು 15 ಆಗಸ್ಟ್ 1947 ರಂದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲಾಯಿತು. ಹೀಗಾಗಿ ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿಂದು ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದೆ. ಆದರೆ ಆಗಸ್ಟ್ 14ರ ದಿನವನ್ನು ದೇಶದ ಇತಿಹಾಸದಲ್ಲಿ ಕಣ್ಣೀರಿನಿಂದ ಬರೆಯಲಾಗಿದೆ.ಈ ವಿಭಜನೆಯ ಮೂಲಕ ಭಾರತವನ್ನು ಎರಡು ಭಾಗಗಳಾಗಿ ವಿಂಗಡಿಸುವುದರ ಜೊತೆಗೆ  ಬಂಗಾಳವನ್ನು ಕೂಡ ವಿಭಜಿಸಲಾಯಿತು ಮತ್ತು ಬಂಗಾಳದ ಪೂರ್ವ ಭಾಗವನ್ನು ಭಾರತದಿಂದ ಬೇರ್ಪಡಿಸಿ ಪೂರ್ವ ಪಾಕಿಸ್ತಾನವನ್ನು ರೂಪಿಸಲಾಯಿತು, ಅದು 1971 ರ ಯುದ್ಧದ ನಂತರ ಬಾಂಗ್ಲಾದೇಶವಾಯಿತು. ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಿಬೇಕು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights