ಅಮೃತ ಮಹೋತ್ಸವ: ಹಲವು ಅಮೃತ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ!

ಭಾರತವು ಇಂದು (ಭಾನುವಾರ) 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಭಾಗವಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಅಮೃತ’ ಎಂಬ ಹೆಸರಿನೊಂದಿಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾಹೋರಾಹಣ ನೆರವೇರಿಸಿ ಮಾತನಾಡಿದ ಅವರು ಕರ್ನಾಟಕ ನಾಡು, ನುಡಿ, ನೆಲ, ಜಲದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ದುಡಿಯುತ್ತೇನೆ. ರೈತರು, ನೇಕಾರರು ಸೇರಿದಂತೆ ವಿವಿಧ ಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.

ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಅಪ್ಪರ್‌ ಕೃಷ್ಣ 3ನೇ ಹಂತವನ್ನು ಮಾಡಿ 5.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅದಕ್ಕೆ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟದ ಅಗತ್ಯವಿದೆ. ಅದರೊಂದಿಗೆ ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಮೇಕೆದಾಟು ಮತ್ತು ಮಹಾದಾಯಿ ಯೋಜನೆಗಳನ್ನು ಪ್ರಾರಂಭಿಸಬೇಕಾಗಿದೆ. ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಕಾನೂನಿನ ಎಲ್ಲಾ ಆಯಾಮಗಳನ್ನು ಅವರಿಗೆ ಮನವರಿಗೆ ಮಾಡಿ, ಪರವಾನಗಿ ಪಡೆದು, ಯೋಜನೆಯನ್ನ ಪ್ರಾರಂಭಿಸುತ್ತೇವೆ. ಬೆಂಗಳೂರು ಮತ್ತು ಹಲವು ಗ್ರಾಮಗಳಿಗೆ ಕುಡಿಯುವ ನೀರು ತರುತ್ತೇವೆ ಎಂದು ಅವರು ಹೇಳಿದ್ದಾರೆ.

ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟ ಉತ್ತೇಜಿಸಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ 225 ಕೂಟಿ ರೂ ಮೂಲ ಬಂಡವಾಳವನ್ನು ಒದಗಿಸಿ, ಪ್ರತಿ ಸಂಸ್ಥೆಗೂ 30 ಲಕ್ಷ ರೂ ನೀಡಲಾಗುವುದು ಎಂದು ಬೊಮ್ಮಾಯಿ ಪ್ರಕಟಿಸಿದ್ದಾರೆ.

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಸಿಕೊಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಅಮೃತ ಗ್ರಾಮ ಪಂಚಾಯತಿ ಯೋಜನೆಯ ಅಡಿಯಲ್ಲಿ ಆಯ್ದ 750 ಗ್ರಾಮ ಪಂಚಾಯಿತಿಗಳಿಗೆ ಪ್ರತಿ ಮನೆಗೆ ಕುಡಿಯುವ ನೀರು, ಘನತ್ಯಾಜ್ಯ ವಿತರಣೆ, ವಿದ್ಯುತ್‌, ಡಿಜಿಟಲ್‌ ಲೈಬ್ರರಿಗಳನ್ನ ತೆರೆಯುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನ: ‘ಕಿಸಾನ್ ಮಝ್ದೂರ್ ಅಝಾದಿ ಸಂಗ್ರಾಮ್ ದಿವಸ್’ ಆಚರಣೆಗೆ ರೈತರ ನಿರ್ಧಾರ

ಅಮೃತ ನಿರ್ಮಲ ನಗರ ಯೋಜನೆಯಡಿ 75 ನಗರಗಳನ್ನು ಆಯ್ಕೆ ಮಾಡಿ, ಅವುಗಳ ಸ್ವಚ್ಛತೆ ಕಾಪಾಡಲು ಮತ್ತು ಸೌಂದರ್ಯ ವೃದ್ಧಿಗಾಗಿ ಪ್ರತಿ ನಗರಕ್ಕೂ ಒಂದು ಕೋಟಿ ರೂ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅಮೃತ ಶಾಲಾ ಸೌಲಭ್ಯ ಯೋಜನೆಯಡಿ 750 ಶಾಲೆಗಳಿಗೆ 75 ಕೋಟಿ ರೂ ಮೀಸಲಿಡಲಾಗುವುದು. ಈ ಪೈಕಿ ಪ್ರತಿ ಶಾಲೆಗಳಿಗೂ 10 ರೂಗಳನ್ನು ಒದಗಿಸಿ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಮೃತ ಅಂಗನವಾಡಿ ಕೇಂದ್ರಗಳ ನಿರ್ಮಾಣ ಯೋಜನೆಯಡಿ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 1 ರೂ ಲಕ್ಷ ಒದಗಿಸಲಾಗುತ್ತದೆ.

ಬೆಂಗಳೂರಿನ 75 ಕೊಳೆಗೇರಿಗಳ ಸುಧಾರಣೆ ಮತ್ತು 75 ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಡಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯಗಳ್ನು ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ ವೆಚ್ಚ ಮಾಡಲಾಗುವುದು.

ಅಮೃತ ಕೌಶಲ ತರಬೇತಿ ಯೋಜನೆಗೆ 112 ಕೋಟಿ ನೀಡಲಾಗಿವುದು. ಈ ಯೋಜನೆಯ ಅಡಿಯಲ್ಲಿ 75,000 ಯುವಕ ಯುವತಿಯರಿಗೆ  ಕೌಶಲ್ಯ ತರಬೇತಿ ನೀಡಲಾಗುವುದು.

ಅಮೃತ ಕ್ರೀಡಾ ಪ್ರೋತ್ಸಾಹ ಯೋಜನೆ ಅಡಿಯಲ್ಲಿ 76 ಕ್ರೀಡಾಪಟುಗಳನ್ನು ದತ್ತು ಪಡೆದುಕೊಂಡು ತರಬೇತಿ ನೀಡಲಾಗುವುದು.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ 75 ನವೋದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಯೋಗಿ ಆದಿತ್ಯಾನಾಥ್‌ ವಿರುದ್ದ ಕಣಕ್ಕಿಳಿಯಲಿದ್ದಾರೆ ಮಾಜಿ ಐಎಎಸ್‌ ಅಧಿಕಾರಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights