ಇಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆ, ಕೊಲೆ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ..!

ಆಂಧ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ಆಂಧ್ರಪ್ರದೇಶದ ಗುಂಟೂರು ನಗರದಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸ್ಥಳೀಯರಲ್ಲಿ ಭಾರೀ ಭೀತಿಯನ್ನುಂಟು ಮಾಡಿದೆ.

ಪೊಲೀಸರ ಪ್ರಕಾರ, ವಿದ್ಯಾರ್ಥಿಯು ಕಾಕಣಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಬೈಕ್ ನಲ್ಲಿ ಆಕೆಯ ಬಳಿ ಬಂದಿದ್ದಾನೆ. ಅವಳು ಆತನೊಂದಿಗೆ ಸವಾರಿ ಮಾಡಲು ನಿರಾಕರಿಸಿದಾಗ ಅವಳೊಂದಿಗೆ ಅವನು ವಾದಿಸಿದ್ದಾನೆ. ನಂತರ ಆರೋಪಿ ಚಾಕು ತೆಗೆದು ಆಕೆಯ ಕುತ್ತಿಗೆ ಮತ್ತು ಹೊಟ್ಟೆಯ ಮೇಲೆ ಪದೇ ಪದೇ ಇರಿದ್ದಾನೆ. ಸಂತ್ರಸ್ತೆ ಕೆಳಗೆ ಬಿದ್ದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ತಕ್ಷಣವೇ ರಕ್ತಸ್ರಾವವಾಗಿದ್ದ ಹುಡುಗಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಬದುಕುಳಿಯಲಿಲ್ಲ.

ಸಿಸಿಟಿವಿ ಆಧಾರದ ಮೇಲೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಿಜಿ ಸವಾಂಗ್ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಕುಟುಂಬಸ್ಥರ ವಿಚಾರಣೆ ಮಾಡಲಾಗುತ್ತಿದ್ದಾರೆ.

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮೃತಳ ಕುಟುಂಬಕ್ಕೆ 10 ಲಕ್ಷ ಘೋಷಿಸಿದ್ದಾರೆ. ಆಕೆಯ ಕುಟುಂಬದ ಬಗ್ಗೆ ಕಾಳಜಿ ವಹಿಸುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಟಿಡಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ (ವಿಧಾನ ಪರಿಷತ್ ಸದಸ್ಯ) ನಾರಾ ಲೋಕೇಶ್ ಅವರು, ಸಂತ್ರಸ್ತೆ ದಲಿತ ವಿದ್ಯಾರ್ಥಿ. ಆಕೆಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ. ಇದು ನಿಜಕ್ಕೂ ಸಮಾಜ ತಲೆ ತಗ್ಗಿಸುವಂತಹ ಕೆಲಸ ಎಂದಿದ್ಧಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.