ಮೂರು ತಿಂಗಳ ಮಗುವಿನ ಮೇಲೆ ಬಾಲಕನಿಂದ ಅತ್ಯಾಚಾರ; ಪ್ರಕರಣ ದಾಖಲು!

ಮೂರು ತಿಂಗಳ ಬಾಲಕಿಯ ಮೇಲೆ 17 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.

ಮಗುವಿನ ಕೂಗು ಕೇಳಿದ ತಾಯಿ ಆಕೆಯ ಬಳಿಗೆ ಧಾವಿಸಿದಾಗ ಮಗುವಿನ ಖಾಸಗಿ ಅಂಗಗಳಿಂದ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಲ್ಲಿಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಉನ್ನತ ದರ್ಜೆಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮಗುವಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ.

ಕುಟುಂಬ ಸದಸ್ಯರ ದೂರಿನ ಮೇರೆಗೆ ಬಾಗವಾಳ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಬಂಧಿಸಲು ಪೊಲೀಸರು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಇಟಾದ ಸೂಪರಿಂಟೆಂಡೆಂಟ್ ಆಫ್ ಪೋಲಿಸ್ (ಎಸ್‌ಎಸ್‌ಪಿ) ತಿಳಿಸಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ದೆಹಲಿ: ದಲಿತ ಬಾಲಕಿ ಮೇಲೆ ಅತ್ಯಾಚಾರ ಖಚಿತ ಪಡಿಸಲು ಪುರಾವೆಯೇ ಇಲ್ಲ: ದೆಹಲಿ ಪೊಲೀಸರು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights