ಹುತಾತ್ಮರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯೇ ನಿಜವಾದ ದೇಶದ್ರೋಹಿ: ರಮಾನಾಥ ರೈ
ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿ ಅಂತವರೇ ನಿಜವಾದ ದೇಶದ್ರೋಹಿಗಳು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಆರೋಪಿಸಿದ್ದಾರೆ.
‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಮಾತ್ರಕ್ಕೆ ಎಲ್ಲವೂ ತಾನೇ ಎಂದು ಸಿ.ಟಿ ರವಿ ಭಾವಿಸಿದಂತಿದೆ. ಮೇಕೆದಾಟು ವಿಷಯದಲ್ಲಿ ಕರ್ನಾಟಕದ ಪರ ನಿಲ್ಲಬೇಕಿದ್ದ ರವಿ, ತಮಿಳುನಾಡು ಪರ ನಿಂತಿರುವುದು ಅಕ್ಷಮ್ಯ. ಇತಿಹಾಸ ಜ್ಞಾನವಿಲ್ಲದ, ಸಾಮಾಜಿಕ ಹಿನ್ನಲೆಯೂ ಇಲ್ಲದ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದವರ ಬಗ್ಗೆ ಅಸಂಬದ್ಧವಾಗಿ, ಹಗುರವಾಗಿ ಮಾತನಾಡುವ ಸಿಟಿ ರವಿ ಅಂಥವರಿಗೆ ಬಿಜೆಪಿ ಮಣೆ ಹಾಕುತ್ತಿರುವುದು ವಿಪರ್ಯಾಸ’ ಎಂದರು.
ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ ಮಹಾತ್ಮರ ಹೆಸರನ್ನು ಬದಲಾಯಿಸುವ ಮತ್ತು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಬಿಜೆಪಿಗರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಸ್ಮಾರಕಗಳ ಹೆಸರನ್ನೂ ಕೂಡ ಬದಲಾಯಿಸಿದರೂ ಅಚ್ಚರಿಯಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಯುಎಪಿಎ ಈಗಿನ ಸ್ವರೂಪವು ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ: 108 ಅಧಿಕಾರಿಗಳ ಬಹಿರಂಗ ಪತ್ರ

