60 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಬಾಲಕರು ಸೇರಿ ಐವರ ಬಂಧನ!

60 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. 18 ವರ್ಷದೊಳಗಿನ ಇಬ್ಬರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಿಂಗ್ರೌಲಿ ಜಿಲ್ಲೆಯ ವಿಂಧ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಯಂತ್ ಚೌಕಿ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಮಹಿಳೆ ತನ್ನ ಸಹೋದರಿಯೊಂದಿಗೆ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಐವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ದಲಿತ ಬಾಲಕಿ ಮೇಲೆ ಅತ್ಯಾಚಾರ ಖಚಿತ ಪಡಿಸಲು ಪುರಾವೆಯೇ ಇಲ್ಲ: ದೆಹಲಿ ಪೊಲೀಸರು

ಘಟನೆ ನಡೆದ ಕೂಡಲೇ ಆರೋಪಿಗಳು ಪರಾರಿಯಾಗಿದ್ದರು. ಅತ್ಯಾಚಾರಕ್ಕೊಳಗಾದ ಬುಡಕಟ್ಟು ಮಹಿಳೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧಿಸಿದಂತೆ 18 ವರ್ಷದೊಳಗಿನ ಇಬ್ಬರು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿಗಳು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಸಿಂಗ್ರೌಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್ ಹೇಳಿದ್ದಾರೆ.

ಇದನ್ನೂ ಓದಿ: ಮೂರು ತಿಂಗಳ ಮಗುವಿನ ಮೇಲೆ ಬಾಲಕನಿಂದ ಅತ್ಯಾಚಾರ; ಪ್ರಕರಣ ದಾಖಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights