ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್!

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.

ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರೆಗೆ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ ಆರ್ಟಿಸಿ ಬಸ್ ಗಳಲ್ಲಿ ಪ್ರಯಾಣಿಸುವ ಅವಕಾಶ ನೀಡಿದೆ.

ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಉಚಿತವಾಗಿ ಬಸ್ ಪ್ರಯಾಣ ಮಾಡಬಹುದು. ವಿದ್ಯಾರ್ಥಿಗಳು ಪಿಯು ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸುವ ಮೂಲಕ ಬ ಕೆಸ್ ಆರ್ಟಿಸಿ ಬಸ್ ನಲ್ಲಿ ಪ್ರಯಾಣ ಮಾಡಬಹುದು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆ  ಹೊರಡಿಸಿದೆ.

ಕೊರೊನಾ ಹರಡುವ ಭೀತಿಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದ್ದು. ಆದರೆ 800 ಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶವನ್ನು ತಿರಸ್ಕರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದರು. ಇವರಿಗೆಲ್ಲಾ ನಾಳೆಯಿಂದ ಪರೀಕ್ಷೆ ನಡೆಸಲಾಗುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights