ಕರ್ನಾಟಕದಲ್ಲಿ ಇಂಧನ ಬೆಲೆಯನ್ನು ಕಡಿತಗೊಳಿಸುವ ಪ್ರಸ್ತಾಪವಿಲ್ಲ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಪೆಟ್ರೋಲ್ ಸೇರಿದಂತೆ ಇಂಧನದ ಬೆಲೆಯನ್ನು ಕಡಿತಗೊಳಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ತಮಿಳುನಾಡಿನಂತೆ ರಾಜ್ಯದಲ್ಲಿಯೂ ಪೆಟ್ರೋಲ್ ಬೆಲೆಯನ್ನು ಕಡಿತಗೊಳಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, “ಅಂತಹ ಯಾವುದೇ ಪ್ರಸ್ತಾಪವಿಲ್ಲ” ಎಂದು ಹೇಳಿದ್ದಾರೆ.

ತಮಿಳುನಾಡು ಸರ್ಕಾರ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ. ಅದೇ ರೀತಿಯಲ್ಲಿ, ರಾಜ್ಯದಲ್ಲಿ ಇಂಧನ ಬೆಲೆಯನ್ನು ಕಡಿತಗೊಳಿಸುವಂತೆ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ.

ಕೊರೊನಾ ಕೇಂದ್ರಗಳಲ್ಲಿ ಹಣ ಪಡೆದು ಕೋವಿಡ್‌ ನೆಗೆಟಿವ್‌ ಪ್ರಮಾಣಪತ್ರಗಳನ್ನು ನೀಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಘಟನೆಯ ಬಗ್ಗೆ ಗಮನಕ್ಕೆ ಬಂದಿದೆ. ಸೂಕ್ತ ಕ್ರಮ ಕೈಗೊಳ್ಳಲು ರೈಲ್ವೆ ನಿಲ್ದಾಣಗಳು ಅಥವಾ ಬಸ್ ನಿಲ್ದಾಣಗಳಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಯೋಗಿ ಇಮೇಜ್‌ ಕುಸಿಯುತ್ತಿದ್ದರೂ ಬಿಜೆಪಿ ಅವರಿಗೆ ಒತ್ತು ಕೊಡುತ್ತಿರುವುದೇಕೆ?!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights