ಅಫ್ಘಾನಿಸ್ತಾನದಲ್ಲಿ DW ಪತ್ರಕರ್ತನ ಸಂಬಂಧಿಯನ್ನು ಗುಂಡಿಕ್ಕಿ ಕೊಂದ ತಾಲಿಬಾನ್ ಉಗ್ರರು..!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸವನ್ನು ಸುದ್ದಿ ಮಾಡುತ್ತಿದ್ದ ಡಾಯ್ಚ ವೆಲ್ಲೆ ಪತ್ರಕರ್ತನ ಸಂಬಂಧಿಯನ್ನು ತಾಲಿಬಾನ್ ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪರ್ತಕರ್ತನ ಇನ್ನೋರ್ವ ಸಂಬಂಧಿ ಗಂಭೀರವಾಗಿ ಗಾಯಗೊಂಡಿದ್ದು ಇತರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಉಗ್ರಗಾಮಿಗಳು ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ಜರ್ಮನಿ ಪತ್ರಕರ್ತರಿಗಾಗಿ ಮನೆ-ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.

ತಾಲಿಬಾನಿಗಳು ಮಾಧ್ಯಮ ಕಾರ್ಯಕರ್ತರು ಮತ್ತು ಅಫ್ಘಾನಿಸ್ತಾನದಲ್ಲಿರುವ ಅವರ ಕುಟುಂಬಗಳಿಗೆ ತೊಂದರೆಯನ್ನುಂಟು ಮಾಡುತ್ತಿರುವುದನ್ನ ಡಿಡಬ್ಲ್ಯೂ ಡೈರೆಕ್ಟರ್ ಜನರಲ್ ಪೀಟರ್ ಲಿಂಬರ್ಗ್ ಈ ಹತ್ಯೆಯನ್ನು ಖಂಡಿಸಿದ್ದಾರೆ.

“ನಿನ್ನೆ ತಾಲಿಬಾನ್ ನಮ್ಮ ಸಂಪಾದಕರೊಬ್ಬರ ಹತ್ತಿರದ ಸಂಬಂಧಿಯನ್ನು ಹತ್ಯೆ ಮಾಡಿರುವುದು ಅಚ್ಚರಿಯ ದುರಂತ. ಅಫ್ಘಾನಿಸ್ತಾನದಲ್ಲಿರುವ ನಮ್ಮ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬಗಳು ತಮ್ಮನ್ನು ತಾವು ಕಾಪಾಡಿಕೊಳ್ಳುವುದು ಕಷ್ಟಸಾಧ್ಯವಾಗುತ್ತಿದೆ” ಎಂದು ಡಿಡಬ್ಲ್ಯೂ ಡೈರೆಕ್ಟರ್ ಅವರು ಹೇಳಿದ್ದಾರೆ.

“ತಾಲಿಬಾನ್ ಈಗಾಗಲೇ ಪತ್ರಕರ್ತರಿಗಾಗಿ ಕಾಬೂಲ್ ಮತ್ತು ಪ್ರಾಂತ್ಯಗಳಲ್ಲಿ ಸಂಘಟಿತ ಹುಡುಕಾಟಗಳನ್ನು ನಡೆಸುತ್ತಿದೆ ಎಂಬುದು ಸ್ಪಷ್ಟವಾಗಿದೆ. ನಮಗೆ ಸಮಯ ಮೀರಿದೆ!” ತಾಲಿಬಾನ್ ಕನಿಷ್ಠ ಮೂರು ಇತರ ಡಿಡಬ್ಲ್ಯೂ ಪತ್ರಕರ್ತರ ಮನೆಗಳ ಮೇಲೆ ದಾಳಿ ಮಾಡಿದೆ ಎಂದು ಬ್ರಾಡ್‌ಕಾಸ್ಟರ್ ಹೇಳಿದರು.

ಕಾಬೂಲ್ ಅನ್ನು ವಶಪಡಿಸಿಕೊಂಡ ನಂತರ, ತಾಲಿಬಾನ್‌ಗಳು ಮಾಧ್ಯಮ ಸ್ವಾತಂತ್ರ್ಯವನ್ನು ಮತ್ತು ತಮ್ಮ ಎಲ್ಲ ವಿರೋಧಿಗಳಿಗೆ ಸ್ವಾತಂತ್ರ್ಯವನ್ನು ನೀಡುವ ಭರವಸೆಯನ್ನು ನೀಡುವ ಸಾರ್ವಜನಿಕ ಸಂಪರ್ಕವನ್ನು ಪ್ರಾರಂಭಿಸಿತು. ಆದರೆ ದಿನ ಕಳೆದಂತೆ ತಾಲಿಬಾನಿಗಳ ಉಗ್ರತೆ ಬಯಲಾಗುತ್ತಿದೆ.

DW ಮತ್ತು ಇತರ ಜರ್ಮನ್ ಮಾಧ್ಯಮ ಸಂಸ್ಥೆಗಳು ತಮ್ಮ ಅಫ್ಘಾನ್ ಸಿಬ್ಬಂದಿಗೆ ಸಹಾಯ ಮಾಡಲು ತ್ವರಿತ ಕ್ರಮ ಕೈಗೊಳ್ಳುವಂತೆ ಜರ್ಮನ್ ಸರ್ಕಾರಕ್ಕೆ ಮನಿವಿ ಮಾಡಿವೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights