ದೇಶದಲ್ಲಿ ಕೊರೊನಾ ಏರಿಳಿತ : ಹೊಸದಾಗಿ 34,457 ಕೇಸ್ ಪತ್ತೆ – 375 ಜನ ಬಲಿ!

ದೇಶದಲ್ಲಿ ಕೊರೊನಾ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 34,457 ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ 375 ಜನ ಮಹಾಮಾರಿಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 36,347 ರೋಗಿಗಳು ಚೇತರಿಸಿಕೊಂಡಿದ್ದಾರೆ. ಈ ಮೂಲಕ ದೇಶಾದ್ಯಂತ ಒಟ್ಟು ಚೇತರಿಕೆ 3,15,97,982 ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,61,340 ರಷ್ಟಿದೆ.

ಹೊಸದಾಗಿ ದಾಖಲಾದ 34,457 ಪ್ರಕರಣಗಳ ಪೈಕಿ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ 20,224 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 4,365 ಪ್ರಕರಣಗಳು, ತಮಿಳುನಾಡು 1,668 ಪ್ರಕರಣಗಳು, ಕರ್ನಾಟಕ 1,453 ಪ್ರಕರಣಗಳು ಮತ್ತು ಆಂಧ್ರಪ್ರದೇಶದಲ್ಲಿ 1,435 ಪ್ರಕರಣಗಳು ವರದಿಯಾಗಿವೆ.

24 ಗಂಟೆಗಳಲ್ಲಿ 375 ಜನ ಬಲಿಯಾದವರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ ಸಾವುಗಳು ವರದಿಯಾಗಿವೆ (105), ನಂತರ ಕೇರಳದಲ್ಲಿ 99 ಸಾವುಗಳು ಸಂಭವಿಸಿವೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದಲ್ಲಿ ನಿನ್ನೆ 17,21,205 ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 36,36,043 ಲಸಿಕೆ ಡೋಸ್‌ಗಳನ್ನು ನೀಡಲಾಗಿದ್ದು, ಈವರೆಗೆ ಒಟ್ಟು  57,61,17,350 ಡೋಸ್‌ಗಳನ್ನು ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.