ಲಾಕ್‌ಡೌನ್ ವಿರುದ್ಧ ಪ್ರತಿಭಟನೆ: ಜನರು – ಪೊಲೀಸರ ನಡುವೆ ಘರ್ಷಣೆ; 218 ಜನರ ಬಂಧನ!

ಆಸ್ಟ್ರೇಲಿಯಾದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮತ್ತೆ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಲಾಕ್‌ಡೌನ್‌ ವಿರುದ್ದ ಮೆಲ್ಬೋರ್ನ್ ಮತ್ತು ಸಿಡ್ನಿ ನಗರಗಳಲ್ಲಿ ಜನರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. 218 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಭಾರೀ ಮೊತ್ತಡ ದಂಡ ವಿಧಿಸಿದ್ದಾರೆ.

ಮೆಲ್ಬೋರ್ನ್‌ನಲ್ಲಿ, 4,000 ಜನರು ರ್ಯಾಲಿ ನಡೆಸಿದ್ದು, ಅವರನ್ನು ಚದುರಿಸಲು ಪೊಲೀಸರು ಪೆಪ್ಪರ್ ಸ್ಪ್ರೇ ಅನ್ನು ಬಳಸಿದ್ದಾರೆ. ಅದೇ ರೀತಿಯಲ್ಲಿ ಸಿಡ್ನಿಯಲ್ಲಿಯೂ ಪ್ರತಿಭಟನೆ ನಡೆಸಿದ್ದು, 1,000 ಕ್ಕೂ ಹೆಚ್ಚು ಪೊಲೀಸರು ಲಾಟಿಚಾರ್ಜ್‌ ಮೂಲಕ ಪ್ರತಿಭಟನೆಯನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಡ್ನಿಯಲ್ಲಿ 825 ಹೊಸದಾಗಿ ಪ್ರಕರಣಗಳು ದಾಖಲಾಗಿವೆ. ಇದು 24 ಗಂಟೆಗಳ ಅವಧಿಯಲ್ಲಿ ಆಸ್ಟ್ರೇಲಿಯಾದ ಪ್ರದೇಶವೊಂದರಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಸಿಡ್ನಿಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ಆಸ್ಟ್ರೇಲಿಯಾ ಸೈನ್ಯವನ್ನು ನಿಯೋಜಿಸಲಿದೆ ಎಂದು ವರದಿಯಾಗಿದೆ.

A protester is arrested by police in Sydney, Australia, 21 August 2021

ಬ್ರಿಸ್ಬೇನ್‌ನಲ್ಲಿ 2,000 ಕ್ಕೂ ಹೆಚ್ಚು ಪ್ರತಿಭಟನಾಕಾರರು ದೊಡ್ಡ ಶಾಂತಿಯುತ ಮೆರವಣಿಗೆಯನ್ನು ನಡೆಸಿದ್ದಾರೆ.

ಪೊಲೀಸರು 218 ಜನರನ್ನು ಬಂಧಿಸಿದ್ದಾರೆ ಮತ್ತು ಕನಿಷ್ಠ ಏಳು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿತರೆಲ್ಲರಿಗೂ  5,452 ಡಾಲರ್‌ (£ 2,850) (ಭಾರತೀಯ ರೂಪಾಯಿಯಲ್ಲಿ 4,05,369 ರೂ) ದಂಡವನ್ನು ವಿಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಮೂರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಕಾಬೂಲ್ ನಲ್ಲಿ ಕರುಳು ಹಿಂಡೋ ದೃಶ್ಯ : ಪುಟ್ಟ ಮಕ್ಕಳನ್ನು ಅಮೇರಿಕ ಯೋಧರ ಕೈಗಿಡುತ್ತಿರುವ ಜನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights