ಅಂತರರಾಜ್ಯ ಜಲವಿವಾದ: ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ‌

ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆಗೆ ಸರ್ವ ಪ್ರಯತ್ನ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇದೆ ತಿಂಗಳ 25 ನೇ ತಾರೀಖಿನಂದು ನವದೆಹಲಿಗೆ ತೆರಳಿ 26 ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ , ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇರುವ ತಜ್ಞರ ಸಮಿತಿ ಮುಂದುವರೆಯಲಿದೆ. ಕೇಂದ್ರ ವಿಪತ್ತು ನಿರ್ವಹಣಾ ಸಮಿತಿ ಆಕ್ಟೊಬರ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕೋವಿಡ್ ಮೂರನೇ ಅಲೆಯ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕೋವಿಡ್ ತಜ್ಞರ ಸಮಿತಿ ಹಾಗೂ ಸಂಬಂಧ ಪಟ್ಟ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತ: ಒಂದು ವರ್ಷದಲ್ಲಿ ಭಾರತದಲ್ಲಿ 1 ಲಕ್ಷ ಶಿಶುಗಳ ಸಾವು: ವಿಶ್ವ ಬ್ಯಾಂಕ್‌ ವಿಶ್ಲೇಷಣೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights