ವಿಷಾಹಾರ ಸೇವನೆ : ನೂರಕ್ಕೂ ಹೆಚ್ಚು ಜನ ಅಸ್ವಸ್ಥ – ಆಸ್ಪತ್ರೆಗೆ ದಾಖಲು!

ವಿಷಾಹಾರ ಸೇವಿಸಿ ನೂರಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮಕ್ಕೆ ಆಗಮಿಸಿ ಆಹಾರ ಸೇವಿಸಿದ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಕಾರ್ಯಕ್ರಮದಲ್ಲಿ ಹೋಳಿಗೆ ಸೀಕರಣೆ ಸಿಹಿ ಅಡುಗೆ ಮಾಡಲಾಗಿತ್ತು. ಊಟ ಮಾಡಿದ ಹಲವಾರು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ.

ಬೆಣ್ಣೆಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 20ಕ್ಕೂ ಹೆಚ್ಚು ಜನರನ್ನು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights