ದೇಶದಲ್ಲಿ ಕೊರೊನಾ ಏರಿಳಿಕೆ : 37,593 ಹೊಸ ಕೇಸ್ ಪತ್ತೆ – 648 ಜನ ಬಲಿ!

ದೇಶದಲ್ಲಿ ಕೊರೊನಾ ಏರಿಳಿಕೆ ಮುಂದುವರೆದಿದ್ದು, 37,593 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ 648 ಜನ ಮಹಾಮಾರಿ ಕೊರೊನಾಕ್ಕೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 37,593 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಾಗಿದ್ದು, 648 ಜನ ಸಾವನ್ನಪ್ಪಿದ್ದಾರೆ. 37,593 ಹೊಸ ಪ್ರಕರಣಗಳ ಪೈಕಿ ಕೇರಳದಲ್ಲಿ 24,296 ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ 4,355 ಪ್ರಕರಣಗಳು, ತಮಿಳುನಾಡಿನಲ್ಲಿ 1,585 ಪ್ರಕರಣಗಳು, ಕರ್ನಾಟಕದಲ್ಲಿ 1,259 ಪ್ರಕರಣಗಳು ಮತ್ತು ಆಂಧ್ರಪ್ರದೇಶದಲ್ಲಿ 1,248 ಪ್ರಕರಣಗಳು ದಾಖಲಾಗಿವೆ.

ಇನ್ನೂ 648 ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು (288) ಸಾವಿನ ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ 173 ಸಾವುಗಳು ಸಂಭವಿಸಿವೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 34,169 ಕೋವಿಡ್ -19 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಚೇತರಿಕೆಗಳ ಸಂಖ್ಯೆ 3,17,54,281 ಕ್ಕೆ ಏರಿಕೆಯಾಗಿದೆ. ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 3,22,327 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,25,12,366ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,35,758ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವ್ಯಾಕ್ಸಿನೇಷನ್ ವಿಷಯಕ್ಕೆ ಬಂದರೆ ಕಳೆದ 24 ಗಂಟೆಗಳಲ್ಲಿ ಒಟ್ಟು 61,90,930 ಡೋಸ್‌ಗಳನ್ನು ನೀಡಲಾಗಿದೆ. ಈವರೆಗೆ ಒಟ್ಟು 59,55,04,593 ಡೋಸ್‌ಗಳನ್ನು ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 17,92,755 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights