ಭಾರೀ ಮಳೆಗೆ ನಂದಿಬೆಟ್ಟ ಬ್ರಹ್ನಗಿರಿಯಲ್ಲಿ ಭೂ ಕುಸಿತ : ರಸ್ತೆ ಸಂಪರ್ಕ ಬಂದ್!

ಭಾರೀ ಮಳೆಯಿಂದಾಗಿ ಚಿಕ್ಕಬಳ್ಳಾಪುರ ನಂದಿಬೆಟ್ಟದಲ್ಲಿ ಭೂ ಕುಸಿತದಿಂದಾಗಿ ರಸ್ತೆ ಸಂಪರ್ಕ ಸಂಪೂರಣವಾಗಿ ಕಡಿತಗೊಂಡಿದೆ. ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ಹತ್ತು ಅಡಿ ಆಳಕ್ಕೆ ಮುಖ್ಯ ರಸ್ತೆ ಕುಸಿದಿದೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ.

ನಂದಿಬೆಟ್ಟದ ಪರಿಸರದಲ್ಲಿ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದ್ದು ಮೇಲ್ಭಾಗದಿಂದ ಮಣ್ಣು ಕುಸಿದೆ. ಮಣ್ಣು, ಬೃಹತ್ ಬಂಡೆ, ಮರ ಗಿಡಗಳು, ವಿದ್ಯುತ್ ಕಂಬಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ವಿದ್ಯುತ್ ಕಂಬಗಳು ರಸ್ತೆಗುಳಿದ್ದರಿಂದ ಆ ಭಾಗದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ.

ರೆಸಾರ್ಟ್ ಬುಕ್ ಮಾಡಿಕೊಂಡು ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಬೆಟ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಮಣ್ಣು ತೆರವುಗೊಳಿಸುವ ಕಾರ್ಯವನ್ನು ಅಧಿಕಾರಿಗಳು ಆರಂಭಿಸಿದ್ದಾರೆ. ನಂದಿಬೆಟ್ಟದ ಚೆಕ್ ಪೋಸ್ಟ್ ನ ಸ್ವಲ್ಪ ದೂರದಲ್ಲೇ ರಸ್ತೆಗೆ ಅಡ್ಡಲಾಗಿ ಮಣ್ಣು ಶೇಕರಣೆಯಾಗಿದೆ.ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಭೂ ಕುಸಿತವಾಗಿರೋದು. ಮಲೆನಾಡು ಭಾಗದಲ್ಲಿ ಕಾಣಿಸುತ್ತಿದ್ದ ದೃಶ್ಯಗಳನ್ನ ತಮ್ಮಲ್ಲಿ ಆಗಿರೋದನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights