ನಕಲಿ ಮದ್ಯ ಸೇವಿಸಿ 10 ಜನರು ಸಾವು; 09 ಮಂದಿ ಪೊಲೀಸರ ಅಮಾನತು!

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 10 ಜನರ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಳಿಕ ಒಂಬತ್ತು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನಕಲಿ ಮದ್ಯ ಸೇವಿಸಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ ಮತ್ತು ಇತರ ಆರು ಜನರ ಸಾವಿಗೆ ಕಾರಣವೇನು ಎಂದು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ, “ಮೂವರು ಎಸ್‌ಎಚ್‌ಒಗಳು ಮತ್ತು ಆರು ಕಾನ್‌ಸ್ಟೇಬಲ್‌ಗಳು ಸೇರಿದಂತೆ ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳಿಸಲಾಗಿದ್ದ ನಾಲ್ಕು ಜನರ ಒಳಾಂಗಗಳ ಮಾದರಿಗಳಲ್ಲಿ ಮೀಥೈಲ್ ಆಲ್ಕೋಹಾಲ್ ಇರುವುದನ್ನು ದೃಢಪಟ್ಟಿದೆ” ಎಂದು ಅವರು ಹೇಳಿದ್ದಾರೆ.

ಹೀಗಾಗಿ ನಾಲ್ಕು ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿರುವುದು ಖಚಿತವಾಗಿದೆ ಎಂದು ಅವರು ಹೇಳಿದರು.

ಕಳೆದ ನಾಲ್ಕು ದಿನಗಳಲ್ಲಿ ನಕಲಿ ಮದ್ಯ ಸೇವಿಸಿದ ನಂತರ ಹತ್ತು ಜನರು ಆಗ್ರಾದಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೃತಪಟ್ಟವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಜಿಲ್ಲೆಯ ಡಿಯೋರಿಯಾ ಗ್ರಾಮದಲ್ಲಿ ನಾಲ್ಕು ಸಾವುಗಳು ಮತ್ತು ಶಮ್ಸಾಬಾದ್ ಪ್ರದೇಶದ ಗರ್ಹಿ ಜಹಾನ್ ಗ್ರಾಮದಲ್ಲಿ ಎರಡು ಸಾವುಗಳು ವರದಿಯಾಗಿವೆ.

ಕೌಲಾರ ಕಲಾನ್ ಮತ್ತು ಬಾರ್ಕುಲಾ ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಹಳ್ಳಿಗಳಲ್ಲಿ ನಕಲಿ ಮದ್ಯ ಸುಲಭವಾಗಿ ಸಿಗುತ್ತದೆ. ಅದನ್ನು ಮಾರಾಟ ಮಾಡುವವರ ಮೇಲೆ ಕಡಿವಾಣ ಹಾಕುವಂತೆ ಆಡಳಿತವನ್ನು ಸ್ಥಳೀಯ ಜನರು ಒತ್ತಾಯಿಸಿದ್ದಾರೆ.

ತಾಜ್ ಗಂಜ್, ಶಮ್ಸಾಬಾದ್ ಮತ್ತು ಡೌಕಿ ಪ್ರದೇಶಗಳ ಮೂವರು ಸ್ಟೇಷನ್ ಹೌಸ್ ಆಫೀಸರ್‌ಗಳ (ಎಸ್‌ಎಚ್‌ಒ) ವರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರಕ್ಕೆ ಹೋದರೆ ಜನ ಉಗಿಯುತ್ತಾರೆ: ಶಿವಮೊಗ್ಗದಲ್ಲಿ ಬಿಜೆಪಿ ಅಧ್ಯಕ್ಷ ರಾಜೀನಾಮೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights