ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆ; 24 ಗಂಟೆಯಲ್ಲಿ 46,164 ಪ್ರಕರಣಗಳು ಪತ್ತೆ!

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 46,164 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಬುಧವಾರಕ್ಕಿಂತ ಶೇ.22ರಷ್ಟು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಅಲ್ಲದೆ, 607 ಮಂದಿ ಸಾವನ್ನಪ್ಪಿದ್ದಾರೆ.ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 4.36 ಲಕ್ಷಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3.25 ಕೋಟಿಗೆ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.

ಕೇರಳದಲ್ಲಿ ಕಳೆದ 24ಗಂಟೆಗಳಲ್ಲಿ ಶೇ.30ರಷ್ಟು ಕೋವಿಡ್ ಪ್ರಕರಣ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ 31,445 ಕೋವಿಡ್ ಪ್ರಕರಣ ವರದಿಯಾಗಿದೆ. 215 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ 5031 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 216 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.63ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಮೈಸೂರು: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights