ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಪೊಲೀಸರಿಗೆ ದೊರೆತಿವೆ 34 ಸಾಕ್ಷ್ಯಗಳು!

ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ನಡೆದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳದಲ್ಲಿ  ಪೊಲೀಸರಿಗೆ 34 ಸಾಕ್ಷಿ ಸಿಕ್ಕಿವೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಪ್ರಮಿಳಾ‌ ನಾಯ್ಡು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಮಿಳಾ‌ ನಾಯ್ಡು ಹೇಳಿದ್ದಾರೆ.

ಘಟನ ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಅವರನ್ನು ಮಾತನಾಡಿಸಲಿಲ್ಲ” ಎಂದು ತಿಳಿಸಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಇಬ್ಬರೂ ಆಘಾತಗೊಂಡಿದ್ದಾರೆ. ಒಂದೆರಡು ದಿನದ ನಂತರ ಸಹಜ ಸ್ಥಿತಿಗೆ ಬರುತ್ತಾರೆ. ಯುವಕನ ಹಣೆಗೆ ಗಾಯವಾಗಿದೆ ಎಂದು ವೈದ್ಯರುತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಸದ್ಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅವರಿಗೆ ಸಿಕ್ಕಿರುವ ಸುಳಿವುಗಳ ಪ್ರಕಾರ, ಕುಡಿದು ಕುಳಿತಿದ್ದವರು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಹಿಳಾ ಆಯೋಗದಲ್ಲಿ ಸುಮೋಟೊ ಕೇಸ್ ದಾಖಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪ್ರಮಿಳಾ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರಕ್ಕೆ ಹೋದರೆ ಜನ ಉಗಿಯುತ್ತಾರೆ: ಶಿವಮೊಗ್ಗದಲ್ಲಿ ಬಿಜೆಪಿ ಅಧ್ಯಕ್ಷ ರಾಜೀನಾಮೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights