ರಾಜ್ಯದಲ್ಲಿ 2 ವರ್ಷದಲ್ಲಿ 1168 ಅತ್ಯಾಚಾರ ಪ್ರಕರಣಗಳು ದಾಖಲು; ದಿನಕ್ಕೆ ಕನಿಷ್ಟ ಒಂದು ಅತ್ಯಾಚಾರ!

ರಾಜ್ಯದಲ್ಲಿ 2019 ಜನವರಿಯಿಂದ ಮೇ 2021ರವರೆಗೆ ಸುಮಾರು 1,168 ಅತ್ಯಾಚಾರ ಪ್ರಕರಣಗಳು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿವೆ ಎಂದು ವರದಿಯಾಗಿದೆ. ಪ್ರತಿದಿನ ಸರಾಸರಿ ಒಂದು ಅತ್ಯಾಚಾರ ಘಟನೆ ವರದಿಯಾಗುತ್ತಿವೆ ಎಂದು ತಿಳಿದು ಬಂದಿದೆ.

2019ರಿಂದ 2021ರ ವರೆಗೆ 22 ಸಾಮೂಹಿಕ ಅತ್ಯಾಚಾರಗಳು ನಡೆದಿವೆ. ಅಲ್ಲದೆ, 18 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ.

2019ರಿಂದ ವರ್ಷದಿಂದ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗತೊಡಗಿವೆ. ಕಳೆದ ಎರಡೂ ವರ್ಷಗಳಲ್ಲಿ ಮಹಿಳೆಯರ ವಿರುದ್ಧ ಅಮಾನವೀಯ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ.

ಮಹಿಳೆಯರ ಸುರಕ್ಷತೆಗಾಗಿ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದರೂ ಇಂತಹ ಪ್ರಕರಣಗಳು ರಾಜ್ಯದ ಎಲ್ಲಾ ಕಡೆ ನಡೆಯುತ್ತಲೇ ಇದೆ. ಮಹಿಳೆಯರು ಇಂದಿಗೂ ಲೈಂಗಿಕ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರಕ್ಕೆ ಹೋದರೆ ಜನ ಉಗಿಯುತ್ತಾರೆ: ಶಿವಮೊಗ್ಗದಲ್ಲಿ ಬಿಜೆಪಿ ಅಧ್ಯಕ್ಷ ರಾಜೀನಾಮೆ!

2019ರಲ್ಲಿ ಹಿಂಸೆ, ಅಪಹರಣ, ವರದಕ್ಷಣೆ ಸೇರಿದಂತೆ ಮಹಿಳೆಯರ ಮೇಲಿನ ದೌರ್ಜನ್ಯದ 10,227 ಪ್ರಕರಣಗಳು ವರದಿಯಾಗಿವೆ. 2020ರಲ್ಲಿ ಈ ಪ್ರಕರಣಗಳ ಸಂಖ್ಯೆ 10,761ಕ್ಕೆ ಏರಿಕೆಯಾಗಿದ್ದು, 2021 ಮೇ ಅಂತ್ಯದವರೆಗೆ 4,401 ಪ್ರಕರಣಗಳು ವರದಿಯಾಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊರೋನಾ ಲಾಕ್ ಡೌನ್ ನಂತರ ಕಳವು, ಡಕಾಯಿತಿ ಪ್ರಕರಣಗಳು ಕಡಿಮೆಯಾಗಿವೆ. ಆದರೆ, ಮಹಿಳೆಯರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಗಳು ಮಾತ್ರ ಹೆಚ್ಚುತ್ತಲೇ ಇವೆ.  ಸಾಂಕ್ರಾಮಿಕ ಮತ್ತು ಲಾಕ್ ಡೌನ್ ಅವಧಿಯಲ್ಲೂ ರಾಜ್ಯದಲ್ಲಿ ಸುಮಾರು 400 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.

ಕಾನೂನು ಸುವ್ಯವಸ್ಥೆ ವಿಫಲತೆಯಿಂದಾಗಿ ಇಂತಹ ಪ್ರಕರಣಗಳು ನಡೆಯುತ್ತಿವೆ ಎಂಬುದನ್ನು ನಿರಾಕರಿಸುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಆದಾಗ್ಯೂ, ಪೊಲೀಸ್ ಗಸ್ತು ಮತ್ತು ರಾಜ್ಯದಾದ್ಯಂತ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ ಹೆಚ್ಚಿಸಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ವರದಿ ಕಳುಹಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಪೊಲೀಸರಿಗೆ ದೊರೆತಿವೆ 34 ಸಾಕ್ಷ್ಯಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights