ರೈತರ ಭೂಮಿಯನ್ನು ನಿಮ್ಮ ಸ್ನೇಹಿತರಿಗೆ ಕೊಡಲು ಬಿಡುವುದಿಲ್ಲ: ರಾಹುಲ್‌ಗಾಂಧಿ

ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿದೆ. ರೈತರ ಭೂಮಿಯನ್ನು ನಿಮ್ಮ ಕಾರ್ಪೋರೇಟ್ ಸ್ನೇಹಿತರಿಗೆ ಕೊಡಲು ಬಿಡುವುದಿಲ್ಲ ಎಂದು ಕೇಂದ್ರದ ವಿರುದ್ದ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಹೀಗಾಗಿ, ಕೃಷಿ ಕಾಯ್ದೆಗಳ ವಿಚಾರದಲ್ಲಿ ಮತ್ತೆ ಕೇಂದ್ರದ ವಿರುದ್ದ ರಾಹುಲ್‌ಗಾಂಧಿ ಕಿಡಿಕಾರಿದ್ದು, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ವಿರೋಧಿಯಾಗಿದೆ ಎಂದು ಪುನರುಚ್ಛರಿಸಿದ್ದಾರೆ.

ಇದನ್ನೂ ಓದಿ: ಯೋಗಿಗೆ ಸವಾಲು; ಹೊಸ ಪಕ್ಷ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ; ಯೋಗಿ ವಿರುದ್ದವೇ ಸ್ಪರ್ಧೆ!

‘ಹೊಲಗಳು ಮರಳಾಗಲು ಬಿಡುವುದಿಲ್ಲ, ಅದನ್ನು ಅವರ (ಬಿಜೆಪಿ) ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕೃಷಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿಚಾರದಲ್ಲಿ ಹಲವು ಬಾರಿ ರಾಹುಲ್‌ಗಾಂಧಿ ಗುಡುಗಿದ್ದಾರೆ. ಕೃಷಿ ಭೂಮಿಯನ್ನು ಕಾರ್ಪೋರೇಟ್ ಸ್ನೇಹಿತ ವರ್ಗದವರಿಗೆ ನೀಡಲು ಸಂಚು ರೂಪಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ನವೆಂಬರ್ 26ರಂದು ದೆಹಲಿ ಗಡಿಯಲ್ಲಿ ರೈತರು ಆರಂಭಿಸಿರುವ ಹೋರಾಟವು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, 2024ರ ವರೆಗೂ ರೈತ ಹೋರಾಟ ಮುಂದುವರೆಯುತ್ತದೆ ಎಂದು ರೈತರು ಹೇಳಿದ್ದಾರೆ.

ಇದನ್ನೂ ಓದಿ: ಪತ್ನಿಯ ಇಚ್ಛೆಗೆ ವಿರುದ್ದವಾಗಿ ನಡೆಯುವ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಛತ್ತೀಸ್‌ಘಡ ಹೈಕೋರ್ಟ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights