ಪತ್ನಿಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿ ಬರ್ಬರತೆ ಮೆರೆದ ವಿಕೃತ ಪತಿ; ಪ್ರಕರಣ ದಾಖಲು!

ವಿಕೃತ ಮನಸ್ಥಿತಿಯ ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿರುವ ಬರ್ಬರ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ತನ್ನ ಪತ್ನಿ ಮತ್ತೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಅನುಮಾನ ಹೊಂದಿದ್ದ 64 ವರ್ಷದ ವ್ಯಕ್ತಿಯೊಬ್ಬ ತನ್ನ 55 ವರ್ಷದ ಪತ್ನಿಯ ಖಾಸಗಿ ಭಾಗಗಳಿಗೆ ಹೊಲಿಗೆ ವಿಕೃತಿ ಮೆರಿದಿದ್ದಾನೆ.

ಘಟನೆಯ ನಂತರ, ಮಹಿಳೆ ತನ್ನ ಪತಿಯ ವಿರುದ್ಧ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಮಹಿಳೆಯನ್ನು ಆಸ್ಪತ್ರಗೆ ದಾಖಲಿಸಿದ್ದು, ಹೊಲಿಗೆಗಳನ್ನು ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಿರುವ ಪೊಲೀಸರು ಆರೋಪಿಯ ವಿರುದ್ದ ದೈಹಿಕ ಮತ್ತು ಮಾನಸಿಕ ಕಿರುಕುಳ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇಂತಹ ವಿಕೃತ ಕೃತ್ಯಕ್ಕೂ ಕೇವಲ ಕಿರುಕುಳದ ಪ್ರಕರಣ ಪೊಲೀಸರು ತಿಪ್ಪೆ ಸಾರಿಸುವ ಕೆಲಸ ಮಾಡಿದ್ದಾರೆ ಎಂದು ಪೊಲೀಸರು ವಿರುದ್ದವೂ ಆಕ್ರೋಶ ವ್ಯಕ್ತವಾಗಿದೆ.

ವಿಕೃತಿಯ ಬರ್ಬರತೆ ಮೆರೆದಿರುವ ಪತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ಮಹಿಳೆ ಕೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತಃ ಮಹಿಳೆಯೇ ಹಾಗೆ ಹೇಳಿದ್ದಾಳೋ ಅಥವಾ ಒತ್ತಡ ಹೇರಿ ಹಾಗೆ ಹೇಳಿಸಲಾಗಿದೆಯೋ ಎಂಬ ಬಗ್ಗೆಯೂ ಸಂಶಯ ವ್ಯಕ್ತವಾಗಿದೆ.

ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ. ತನ್ನ ಪತ್ನಿ ಹಳ್ಳಿಯ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಅವನು ಅನುಮಾನಿಸಿ ಪ್ರತಿದಿನ ಥಳಿಸುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಯೋಗಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದ ಮಾಜಿ ಐಪಿಎಸ್ ಅಧಿಕಾರಿಯನ್ನು ಬಲವಂತವಾಗಿ ಹೊತ್ತೊಯ್ದ ಪೊಲೀಸರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights