‘ಅತ್ಯಾಚಾರಿಗಳನ್ನ ಎನ್ ಕೌಂಟರ್ ಮಾಡಬೇಕು’ – ಸರ್ಕಾರಕ್ಕೆ ಸಾ.ರಾ ಮಹೇಶ್ ಸಲಹೆ!

ಮೈಸೂರಿನಲ್ಲಿ ಆಗಸ್ಟ್​ 24 ಮಂಗಳವಾರ ರಾತ್ರಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಇಂದು ಬೆಳಿಗ್ಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಅತ್ಯಾಚಾರಿಗಳನ್ನ ಎನ್ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಶಾಸಕ ಸಾ.ರಾ ಮಹೇಶ್ ಸಲಹೆ ನೀಡಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್​ 24 ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್‌ರೇಪ್ ಪ್ರಕರಣದ 6 ಆರೋಪಿಗಳ ಪೈಕಿ 5 ಮಂದಿಯನ್ನು ತಮಿಳುನಾಡಲ್ಲಿ ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನ ಎನ್ಕೌಂಟರ್ ಮಾಡಲು ಸರ್ಕಾರ ಆದೇಶಿಸಬೇಕು ಎಂದು ಸಾ.ರಾ ಮಹೇಶ್ ಕಿಡಿ ಕಾರಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ನಿರ್ದಾಕ್ಷಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿಯೂ ಕೂಡ ಇದೇ ಮಾತುಗಳು ಕೇಳಿ ಬರುತ್ತಿವೆ. ಬಾಳೆಹಣ್ಣು ಮಾರಲು ಬಂದವರು ಯುವತಿಯ ಬಾಳೇ ಹಾಳು ಮಾಡಿದ್ದಾರೆ. ಇವರನ್ನು ಎನ್ ಕೌಂಟರ್ ಮಾಡಬೇಕು ಇಲ್ಲ ಗಲ್ಲಿಗೇರಿಸಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.