ಕೇರಳ ಕಾಂಗ್ರೆಸ್‌ನಲ್ಲೂ ಭಿನ್ನಮತ; ಇಬ್ಬರು ನಾಯಕರ ಅಮಾನತು!

ಒಂದೊಂದೇ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ರಾಜ್ಯಗಳಲ್ಲಿ ಭಿನ್ನಮತ ತಲೆದೂರುತ್ತಿವೆ. ಸದ್ಯ, ಈಗಾಗಲೇ ಪಂಜಾಬ್‌, ಛತ್ತೀಸ್‌ಘಡ, ಮಧ್ಯಪ್ರದೇಶ ಸೇರಿಂದ ವಿವಿಧ ರಾಜ್ಯಗಳಲ್ಲಿ ಬಂಡಾಯ ಎದುರಿಸುತ್ತಿರುವ ಕಾಂಗ್ರೆಸ್‌ಗೆ ಇದೀಗ ಕೇರಳ ಹೊಸ ತಲೆನೋವಾಗಿ ಎದುರಾಗಿದೆ. ಕೇರಳದಲ್ಲಿ ಜಿಲ್ಲಾ ಘಟಕಗಳ ನೂತನ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್‌ನಲ್ಲಿ ಭಿನ್ನಮತ ತಲೆದೋರಿದೆ ಎಂದು ವರದಿಯಾಗಿದೆ.

ಪಕ್ಷದ ಜಿಲ್ಲಾ ಘಟಕಗಳ ನೂತನ ಅಧ್ಯಕ್ಷರ ಆಯ್ಕೆಯನ್ನು ಹೈಕಮಾಂಡ್ ಶನಿವಾರ ಅಂತಿಮಗೊಳಿಸಿತ್ತು. ಆದರೆ, ಈ ನಿರ್ಧಾರದ ವಿರುದ್ದ ಬಹಿರಂಗವಾಗಿ ಭಿನ್ನಮತ ಹೊರಹಾಕಿದ್ದ ಇಬ್ಬರು ನಾಯಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಅಧ್ಯಕ್ಷರ ನೇಮಕ ವಿಚಾರದಲ್ಲಿ ಹೈಕಮಾಂಡ್‌ ನಿರ್ಧಾರದ ವಿರುದ್ದ ಮಾಜಿ ಶಾಸಕ ಕೆ.ಶಿವದಾಸನ್ ಮತ್ತು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್‌ ಕುಮಾರ್ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇವರಿಬ್ಬರನ್ನೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಸುಧಾಕರನ್ ಅಮಾನತುಗೊಳಿಸಿದ್ದಾರೆ.

ಇಬ್ಬರೂ ನಾಯಕರು ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಟಿವಿ ಚಾನೆಲ್ ಮೂಲಕ ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಸುಧಾಕರನ್‌ ಹೇಳಿದ್ದಾರೆ.

ನಾಯಕರ ಮೇಲಿನ ನಿಷ್ಠೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆಯೇ ವಿನಃ ಅರ್ಹತೆಯನ್ನು ಆಧಾರವಾಗಿಟ್ಟುಕೊಂಡು ಅಲ್ಲ ಎಂದು ಅಮಾನತುಗೊಂಡ ನಾಯಕರು ಹೇಳಿಕೆ ನೀಡಿದ್ದರು.

ಕಳೆದ ಕೆಲವು ವಾರಗಳಿಂದ ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್‌ನಲ್ಲಿ ಅಸಮಾಧಾನ ಹೊಗೆಯಾಡುತ್ತಿತ್ತು. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದಕ್ಕೂ ಮುನ್ನ ತಮ್ಮ ಜತೆ ಸಮಾಲೋಚನೆ ನಡೆಸಿಲ್ಲ ಎಂದು ಉಮ್ಮನ್ ಚಾಂಡಿ ಮತ್ತು ರಮೇಶ್ ಚೆನ್ನಿತಲ ಹೈಕಮಾಂಡ್‌ಗೆ ದೂರು ಕೂಡ ನೀಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ್ತೊಂದು ತಲೆನೋವು; ಛತ್ತೀಸ್‌ಘಡ ಮುಖ್ಯಮಂತ್ರಿ ಬದಲಾವಣೆಗೆ ಒತ್ತಡ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights