ಮುಸ್ಲಿಂ ವ್ಯಕ್ತಿಗೆ ‘ಜೈ ಶ್ರೀ ರಾಮ್’ ಎನ್ನಲು ಒತ್ತಾಯ : ವಿಡಿಯೋ ವೈರಲ್!

ಮುಸ್ಲಿಂ ವ್ಯಕ್ತಿಗೆ ‘ಜೈ ಶ್ರೀ ರಾಮ್’ ಎನ್ನಲು ಒತ್ತಾಯಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಯೋದಲ್ಲಿ ಇಬ್ಬರು ವ್ಯಕ್ತಿಗಳು ಮುಸ್ಲಿಂ ವ್ಯಕ್ತಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸುತ್ತಿರುವುದನ್ನು ಕಾಣಬಹುದು.

ಆರಂಭದಲ್ಲಿ ಮುಸ್ಲಿಂ ವ್ಯಕ್ತಿಗೆ ‘ಜೈ ಶ್ರೀ ರಾಮ್’ ಎನ್ನಲು ಇಷ್ಟವಿರಲಿಲ್ಲ. ಆದರೆ ಇಬ್ಬರ ಒತ್ತಾಯದ ನಂತರ ಮುಸ್ಲಿಂ ವ್ಯಕ್ತಿ ಅಂತಿಮವಾಗಿ ‘ಜೈ ಶ್ರೀ ರಾಮ್’ ಎಂದು ಹೇಳಿದರು.

ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ ಎಂದು ಉಜ್ಜಯಿನಿ ಪೊಲೀಸರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights