ಮೈಸೂರು ಅತ್ಯಾಚಾರ ಪ್ರಕರಣ : ಐವರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ!

ಮೈಸೂರು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಐವರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿತು.

ನಿನ್ನೆ ರಾತ್ರಿ ಮೈಸೂರಿನ ಮೂರನೇ ಜೆಎಂಎಫ್​ಸಿ ನ್ಯಾಯಾಲಯಯವು ಈ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿತು.

ಮೈಸೂರು ಪೊಲೀಸರ ಸಾಹಸಮಯ ಕಾರ್ಯಾಚರಣೆ ಖುಷಿ ತಂದಿದೆ. ಆಗಸ್ಟ್‌ 24ರ ಸಂಜೆ 7.30ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿಗೆ ತೆರಳಿದ್ದ ವೇಳೆ ಕೀಚಕರು ಯುವತಿ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯ ಮೆರೆದಿದ್ದರು. ಯುವತಿ ಜೊತೆ ಇದ್ದ ಯುವಕನಿಗೆ ಹಲ್ಲೆ ನಡೆಸಿ ಕುಕೃತ್ಯ ನಡೆಸಿದ್ದರು. ಇದಾದ ಬಳಿಕ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಘಟನೆ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿತ್ತು. ಇನ್ನು ಪೋಲೀಸರು ನಿನ್ನೆ ಐವರು ಆರೋಪಿಗಳನ್ನು ಬಂಧಿಸುವ ಮೂಲಕ ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ನಡೆದ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿತ್ತು. ಸ್ಥಳದಲ್ಲಿ ಸಿಕ್ಕ ಬಸ್ ಟಿಕೇಟ್ ಹಾಗೂ ಚಪ್ಪಲಿ, ಮದ್ಯದ ಬಾಟಲಿ, ಟೆಕ್ನಿಕಲ್ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಜ್ಞಾತಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ಇನ್ನೂ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರ ಶೋಧಕಾರ್ಯವೂ ಚುರುಕುಗೊಳಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights