ಜಾರ್ಖಂಡ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ 7 ಬಾಲಕರಿಂದ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಏಳು ಮಂದಿ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್‌ನ ರಾಂಚಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರರನ್ನು ಬಂಧಿಸಲು ಶೋಧಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಪರಿಚಯದವನಾದ ಒಬ್ಬ ಆರೋಪಿ ತನ್ನ ಬೈಕಿನಲ್ಲಿ ಬಾಲಕಿಯನ್ನು ಸುತ್ತಾಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿದ್ದಾನೆ. ಆತನ ಇನ್ನು6 ಮಂದಿ ಸ್ನೇಹಿತರು ಕಾಯುತ್ತಿದ್ದ ಮಂದಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾನೆ.

ಅವರನ್ನು ನೋಡಿ ಬಾಲಕಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಲಿಲ್ಲ. ಬಳಿಕ 7 ಮಂದಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಠಾಣಾ ಉಸ್ತುವಾರಿ ಅಧಿಕಾರಿ ರಾಣಾ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಆತ್ಮಹತ್ಯೆ; ನಾಲ್ವರು ಪೊಲೀಸರು ಅಮಾನತು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights