ಗಣೇಶೋತ್ಸವಕ್ಕೆ ಅನುಮತಿ ನೀಡದಿದ್ದರೆ ಚುನಾವಣೆ ಬಹಿಷ್ಕಾರ : ಸರ್ಕಾರಕ್ಕೆ ಶ್ರೀರಾಮಸೇನೆ ಎಚ್ಚರಿಕೆ!

ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅವಕಾಶ ನೀಡದೇ ಇದ್ದರೆ ಹುಬ್ಬಳ್ಳಿ-ಧಾರವಾಡದಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಶ್ರೀರಾಮ ಸೇನೆ ಒತ್ತಡ ಹೇರುತ್ತಿದೆ.

ಇಂದು ಧಾರವಾಡದಲ್ಲಿ ಮಾತನಾಡಿದ ಶ್ರೀರಾಮಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ, ‘ಗಣೇಶೀತ್ಸವಕ್ಕೆ ಅನುಮತಿ ನೀಡುವಂತೆ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹಾಗೂ ಗ್ರಾಮೀಣ ಶಾಸಕ ಅಮೃತ ದೇಸಾಯಿ ಮನೆಗೆ ಹೋಗಿ ಮನವಿ ಸಲ್ಲಿಸಲಾಗಿದೆ’ ಎಂದರು.

ಶ್ರೀರಾಮಸೇನೆ ಸಂಘಟನಾ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭನಾ ಮೆರವಣೆಇಗೆ ನಡೆಸಿ, ಬಿಜೆಪಿ ಸರ್ಕಾರ ಹಿಂದೂಗಳ ಆರಾಧ್ಯ ವಿಘ್ನ ವಿನಾಶಕ ಗಣಪತಿ ತಂಟೆಗೆ ಬಂದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೊರೊನಾ 3ನೇ ಅಲೆಯ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕಾ ಬೇಡವಾ ಎನ್ನುವ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಯುತ್ತಿವೆ.

ಈ ವೇಳೆ ಗಣೇಶೋತ್ಸವಕ್ಕೆ ಅನುಮತಿ ನೀಡದ ಬಿಜೆಪಿ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights