ದೇಶದಲ್ಲಿ 42,909 ಹೊಸ ಕೊರೊನಾ ಕೇಸ್ ಪತ್ತೆ : 380 ಜನ ಬಲಿ…!

ದೇಶದಲ್ಲಿ ಕೊರೊನಾ ಏರಿಳಿಕೆಯಾಗುತ್ತಿದ್ದು ಕಳೆದ ಮೂರುನಾಲ್ಕು ದಿನಗಳಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 42,909 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು 380 ಜನ ಬಲಿಯಾಗಿದ್ದಾರೆ.

ದೇಶದಲ್ಲಿ ದಾಖಲಾದ 42,909 ಹೊಸ ಪ್ರಕರಣಗಳಲ್ಲಿ ಕೇರಳದಲ್ಲಿ 29,836 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 4,666 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 1,557 ಪ್ರಕರಣಗಳು, ತಮಿಳುನಾಡಿನಲ್ಲಿ 1,538 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 1,262 ಪ್ರಕರಣಗಳು ದಾಖಲಾಗಿವೆ.

100%

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 380 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಬಲಿಯಾದವರ ಸಂಖ್ಯೆ 4,38,210ಕ್ಕೆ ಏರಿಕೆಯಾಗಿದೆ.

ಇನ್ನೂ 380 ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರದಲ್ಲಿ 131 ಮತ್ತು ಕೇರಳದಲ್ಲಿ 75 ಜನ ಕೊರೊನಾಕ್ಕೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 34,763 ರೋಗಿಗಳು ಚೇತರಿಸಿಕೊಂಡಿದ್ದು ದೇಶದಾದ್ಯಂತ ಒಟ್ಟು 3,19,23,405 ಜನ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,76,324 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ  ಒಟ್ಟು 14,19,990 ಹೊಸ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 31,14,696 ಡೋಸ್‌ಗಳನ್ನು ನೀಡಲಾಗಿದ್ದು, ಒಟ್ಟು ಡೋಸ್‌ಗಳ ಮೊತ್ತವನ್ನು 63,43,81,358 ಕ್ಕೆ ತಲುಪಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights