ಡ್ರಗ್ಸ್ ಪೆಡ್ಲರ್ ನೊಂದಿಗೆ ನಿರಂತರ ಸಂಪರ್ಕ : ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ..!

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸೆಲೆಬ್ರಿಟಿ ಮನೆಗಳ ಮೇಲೆ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.

ಡ್ರಗ್ಸ್ ಜಾಲ ಪತ್ತೆ ಚುರುಕುಗೊಳಿಸಿದ ಪೂರ್ವ ವಿಭಾಗದ ಪೊಲೀಸರು ಡಿಜೆ ವಚನ್ ಚಿನ್ನಪ್ಪ, ಸೆಲೆಬ್ರಿಟಿ ಮಾಡಲ್ ಸೋನಿಯಾ ಅಗರ್ವಾಲ್, ಉದ್ಯಮಿ ಭರತ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪದ್ಮನಾಭನಗರ, ರಾಜಾಜಿನಗರ, ಬೆನ್ಸೆನ್ ಟೌನ್ ನಲ್ಲಿರುವ ಮನೆಗಳ ಮೇಲೆ ದಾಳಿ ಮಾಡಿ ಡ್ರಗ್ಸ್ ಗಾಗಿ ಹುಡುಕಾಟ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಪೆಡ್ಲರ್ ಥಾಮಸ್ ನನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಯೊಂದಿಗೆ ನಂಟು ಹೊಂದಿದ್ದ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ಮಾಡಿ ಡ್ರಗ್ಸ್ ಹುಡುಕಾಟ ಮಾಡಲಾಗಿದೆ. ಈ ಎಲ್ಲಾ ಸೆಲೆಬ್ರಿಟಿಗಳು ಡ್ರಗ್ಸ್ ಪೆಡ್ಲರ್ ನೊಂದಿಗೆ ಸಂಪರ್ಕದಲ್ಲಿದ್ದರು ಎನ್ನಲಾಗುತ್ತಿದೆ.

ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಇಂದು ದಾಳಿ ಮಾಡಿದ್ದಾರೆ. ಸೆಲೆಬ್ರಿಟಿಗಳ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿರುವ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights