ಸುಪ್ರೀಂ ಕೋರ್ಟ್ ಜಡ್ಜ್ ಆಗಿ ಕರ್ನಾಟಕದ ಬಿ.ವಿ ನಾಗರತ್ನ ಪ್ರಮಾಣವಚನ ಸ್ವೀಕಾರ!

ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುಪ್ರೀಂ ಕೋರ್ಟ್ನ ಹಾಲಿ ಮುಖ್ಯ ನ್ಯಾಯಾಧೀಶರಾದ ಚೀಫ್​ ಜಸ್ಟೀಸ್​ ಎನ್ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್​ ಕೊಲಿಜಿಯಂ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರ ಹೆಸರ ಸೇರಿದಂತೆ ಒಟ್ಟು ಒಂಬತ್ತು ನ್ಯಾಯಾಧೀಶರ ಹೆಸರನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. 9 ಜನ ಇಂದು ಸುಪ್ರೀಂ ಕೋರ್ಟ್ ಜಡ್ಜ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸ್ವತಂತ್ರ್ಯ ಭಾರತದಲ್ಲಿ ಈವರೆಗೆ ದೇಶದ ಪರಮೋಚ್ಛ ನ್ಯಾಯಾಲಯಕ್ಕೆ ಮಹಿಳೆಯೊಬ್ಬರು ಮುಖ್ಯ ನ್ಯಾಯಮೂರ್ತಿಗಳಾದ ಇತಿಹಾಸವೇ ಇಲ್ಲ. ಇದೇ ಮೊದಲ ಬಾರಿಗೆ ಜಸ್ಟೀಸ್​ ಬಿ.ವಿ. ನಾಗರತ್ನ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯನ್ಯಾಯಮೂರ್ತಿಯಾಗಿ ಹೊಸ ಇತಿಹಾಸ ಸೃಷ್ಠಿಸುವ ಸಾಧ್ಯತೆಗಳು ದಟ್ಟವಾಗಿವೆ.

ನಾಗರತ್ನಿ ಬಿವಿ ಅವರೊಂದಿಗೇ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ, ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ, ಸಿ.ಟಿ. ರವೀಂದ್ರಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಮಂಗಳವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ (Chief Justice N.V. Ramana) ಹೊಸದಾಗಿ ನೇಮಕಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೊಧಿಸಿದರು. ಇನ್ನು ಇಂದಿನ ಪ್ರಮಾಣವಚನ ಕಾರ್ಯಕ್ರಮದೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾದಂತಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights