ನೆಹರು-ಗಾಂಧಿ ಕುಟುಂಬದ ವಿರುದ್ದ ‘ಮಾನಹಾನಿ’ ವೀಡಿಯೋ; ನಟಿ ಪಾಯಲ್ ರೋಹಟಗಿ ವಿರುದ್ದ ಮತ್ತೊಮ್ಮೆ ಎಫ್‌ಐಆರ್‌ ದಾಖಲು!

ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ಪುಣೆಯಲ್ಲಿ ನಟಿ ಪಾಯಲ್ ರೋಹಟಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಟಿ ವಿರುದ್ದ ಪುಣೆ ನಗರ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಪುಣೆಯ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

36 ವರ್ಷದ ನಟಿಯ ವಿರುದ್ಧ ಈ ಹಿಂದೆಯೂ ದೇಶದ ವಿವಿಧ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಪ್ರಕರಣಗಳ ನೋಂದಣಿಯ ನಂತರ ಆಕೆ ಕ್ರಮವನ್ನು ಎದುರಿಸಿದ್ದಾರೆ.

“ಪಾಯಲ್ ರೋಹಟಗಿ ಅವರು ಪದೇ ಪದೇ ನೆಹರು ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅಂತಹ ಒಂದು ಪೋಸ್ಟ್ ಅನ್ನು ನಾವು ನೋಡಿದ್ದೇವೆ. ಆ ಪೋಸ್ಟ್‌ ಇತ್ತೀಚಿನದ್ದಾಗಿದೆ. ತರುವಾಯ, ನಾವು ಸೈಬರ್ ಅಪರಾಧ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ದೂರುನೀಡಿದ್ದೇವೆ. ಪೊಲೀಸರು ಅದರ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಪುಣೆ ನಗರ ಕಾಂಗ್ರೆಸ್ ವಕ್ತಾರ ರಮೇಶ್ ಅಯ್ಯರ್ ತಿಳಿಸಿದ್ದಾರೆ.

ರೋಹಟಗಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ಕೋಮು ಸಾಮರಸ್ಯವನ್ನು ಕದಡಲು ಪ್ರಚೋದನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುಣೆ ನಗರ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ: ಗುರುಗ್ರಾಮ ನಿವಾಸಿ ವಿರುದ್ಧ ಪ್ರಕರಣ ದಾಖಲು; ಆತ ಖಿನ್ನತೆಗೆ ಒಳಗಾಗಿದ್ದಾನೆ ಎಂದ ಪತ್ನಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights