ಡ್ರಗ್ಸ್ ಕೇಸ್: ಇಡಿ ವಿಚಾರಣೆಗೆ ಹಾಜರಾದ ನಟಿ ರಕುಲ್ ಪ್ರೀತ್ ಸಿಂಗ್..!
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ಶುಕ್ರವಾರ ಹೈದರಾಬಾದ್ ನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಟಾಲಿವುಡ್ನ ಇತರ ಹಲವಾರು ಸೆಲೆಬ್ರಿಟಿಗಳಿಗೂ ಹಾಜರಾಗುವಂತೆ ಕರೆಕೊಟ್ಟಿದೆ.
‘ಗಿಲ್ಲಿ’ ಚಿತ್ರಸ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ರಕುಲ್ ಪ್ರೀತ್ ಸಿಂಗ್ ಈಗ ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿಯೂ ಸಖತ್ ಬ್ಯುಸಿಯಾಗಿದ್ದಾರೆ. ಈ ನಡುವೆ ರಕುಲ್ ಬ್ಯಾಕ್ ಟು ಬ್ಯಾಕ್ ಇಡಿ ವಿಚಾರಣೆಯಲ್ಲಿ ಭಾಗಿಯಾಗುತ್ತಿದ್ದರು. ಅದೂ ನಾಲ್ಕು ವರ್ಷಗಳ ಹಿಂದೆ ನಡೆದಿರುವ ಘಟನೆಗೆ ಎನ್ನಲಾಗಿದೆ.
ನಾಲ್ಕು ವರ್ಷಗಳ ಹಿಂದೆ ಮಾದಕ ವಸ್ತು ಜಾಲದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಆಗಸ್ಟ್ ತಿಂಗಳಿನಲ್ಲಿ ರಕುಲ್ ಗೆ ಇಡಿ ವಿಚಾರಣೆಯಲ್ಲಿ ಭಾಗಿಯಾಗುವಂತೆ ನೋಟಿಸ್ ನೀಡಲಾಗಿತ್ತು. ಮಾದಕ ವಸ್ತು ಸೇವನೆ , ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ರಕುಲ್ ಮಾತ್ರವಲ್ಲ ತೆಲುಗು ಚಿತ್ರರಂಗದ 10 ಮಂದಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದೆ ಎನ್ನಲಾಗಿದೆ.
ಈಗಾಗಲೇ 2017ರಲ್ಲಿಯೂ ರಕುಲ್ ಗೆ ಡ್ರಗ್ಸ್ ಪ್ರಕರಣದ ಬಗ್ಗೆ ವಿಚಾರಣೆ ನಡೆದಿತ್ತು. ಮಂಗಳವಾರು(ಆಗಸ್ಟ್ 31) ಹೈದರಾಬಾದ್ ಇಡಿ ಆಫೀಸ್ ನಲ್ಲಿ ನಿರ್ದೇಶಕ ಪೂರಿ ಜಗನ್ನಾಥ್ ಗೆ ಈ ಪ್ರಕರಣವಾಗಿ ವಿಚಾರಣೆ ನಡೆಇಯಿತು.
ಕೇವಲ ರಕುಲ್ ಮಾತ್ರವಲ್ಲದೇ ಈ ತಿಂಗಳಲ್ಲಿ ರಾಣಾ ದಗ್ಗುಬಾಟಿ, ಶ್ರೀನಿವಾಸ್ ರವಿತೇಜಾ, ನವದೀಪ್, ತಾನಿಶ್ ಮತ್ತು ತರುಣ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ.