ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ: ಅಪರಾಧಿಗೆ ಮರಣ ದಂಡನೆ ಶಿಕ್ಷೆ- ಒಂದು ಲಕ್ಷ ದಂಡ!

ಕಳೆದ ವರ್ಷ ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿ ಯುವಕನಿಗೆ ವಿಶೇಷ ನ್ಯಾಯಾಲಯ ಶುಕ್ರವಾರ ಮರಣದಂಡನೆ ವಿಧಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಅಪರಾಧಿ ಅಶೋಕ್‌ಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದು, 1 ಲಕ್ಷ ದಂಡವನ್ನೂ ವಿಧಿಸಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಬಾಲಕಿ ಕಳೆದ ವರ್ಷ ಆಗಸ್ಟ್ 4 ರಂದು ಬೆರ್ರಿ ಹಣ್ಣುಗಳನ್ನು ತರಲು ಹೋಗಿದ್ದಾಗ ಅಶೋಕ್ ಆಕೆಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಕಬ್ಬಿನ ಗದ್ದೆಯಲ್ಲಿ ಬಾಲಕಿಯ ದೇಹವನ್ನು ದೊರೆತಿತ್ತು. ನಂತರದ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ಎಸಗಿರುವುದು ದೃಢಪಟ್ಟಿತ್ತು.

ನಂತರ ಅಶೋಕ್‌ನನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ಆಂಧ್ರದ ಐವರು ಐಎಎಸ್‌ ಅಧಿಕಾರಿಗಳಿಗೆ ಜೈಲು ಶಿಕ್ಷೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights