ಪಶ್ಚಿಮ ಬಂಗಾಳ ಉಪಚುನಾವಣೆ ಘೋಷಣೆ; ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧೆ!

ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಪ್ರಕಟಿಸಿದೆ. ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 3 ರಂದು ಮತ ಎಣಿಕೆ ನಡೆಯಲಿದೆ. ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ನಿರೀಕ್ಷೆಯಿದೆ.

ಅಲ್ಲದೆ. ಇನ್ನೂ ಮೂರು ಲೋಕಸಭಾ ಮತ್ತು 31 ಇತರ ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ಬಾಕಿ ಉಳಿದಿದೆ.

ಮೇ ತಿಂಗಳಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲುಂಡಿದ್ದ ಮತ್ತು ಪ್ರಸ್ತುತ ಶಾಸಕರಲ್ಲದ ಮಮತಾ ಬ್ಯಾನರ್ಜಿ ಅವರಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ನವೆಂಬರ್ ವರೆಗೆ ಸಮಯವಿದೆ. ಆ ವೇಳೆಯೊಳಗೆ ಅವರು ಶಾಸಕರಾಗಿ ಆಯ್ಕೆಯಾಗಬೇಕಾಗಿದೆ.

ಭಬನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಸಾಧ್ಯತೆ ಇದೆ.

ಸೆಪ್ಟೆಂಬರ್ 6 ರಿಂದ ಸೆಪ್ಟೆಂಬರ್ 13 ರವರೆಗೆ ನಾಮಪತ್ರ ಸಲ್ಲಿಸಲು ಚುನಾವಣಾ ಆಯೋಗ ಸಮಯ ನಿಗಧಿ ಮಾಡಿದೆ.

ಅಸೆಂಬ್ಲಿ ಚುನಾವಣೆಯ ಸಮಯದಲ್ಲಿ ಅಭ್ಯರ್ಥಿಗಳ ಸಾವಿನಿಂದಾಗಿ ಮುಂದೂಡಲ್ಪಟ್ಟ ಪಶ್ಚಿಮ ಬಂಗಾಳದ ಸಂಸರ್‌ಗಂಜ್ ಮತ್ತು ಜಂಗೀಪುರದಲ್ಲಿಯೂ ಉಪಚುನಾವಣೆ ನಡೆಯಲಿದೆ. ಅಲ್ಲದೆ, ಅದೇ ಸಮಯದಲ್ಲಿ ಒಡಿಶಾದ ಪಿಪ್ಲಿಯಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: BJP v/s TMC: ಉಳಿವು ಮತ್ತು ಮರಳಿ ಪಡೆಯುವ ಯತ್ನದಲ್ಲಿ ಬಂಗಾಳದಲ್ಲಿ ಭಾರೀ ಹಿಂಸಾಚಾರ!

ಕೋವಿಡ್ ಪರಿಸ್ಥಿತಿಯ ಕಾರಣ ಚುನಾವಣೆಗಳನ್ನು ನಡೆಸಬಹುದೇ ಎಂದು ಚುನಾವಣಾ ಆಯೋಗವು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದೆ. ಈ ರಾಜ್ಯಗಳಲ್ಲಿ ಕೋವಿಡ್ -19 ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣೆ ನಡೆಸಲು ಉದ್ದೇಶಿಸಿರುವ ಮೂರು ಕ್ಷೇತ್ರಗಳ ಮೇಲೆ ಪ್ರವಾಹವು ಪರಿಣಾಮ ಬೀರಿಲ್ಲ ಎಂದು ಪ. ಬಂಗಾಳದ ಕಾರ್ಯದರ್ಶಿ ತಿಳಿಸಿದ್ದಾರೆ.

“ಆಡಳಿತಾತ್ಮಕ ತುರ್ತುಸ್ಥಿತಿಯನ್ನು ನಿಭಾಯಿವುದಕ್ಕಾಗಿ, ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಲು ಉದ್ದೇಶಿಸಿರುವ ಭಬನಿಪುರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ” ಎಂದು ಇಸಿ ಹೇಳಿದೆ.

ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ಚುನಾವಣಾಧಿಕಾರಿಗಳ ಸಲಹೆಗಳನ್ನು ಪರಿಗಣಿಸಿದ ನಂತರ 31 ವಿಧಾನಸಭಾ ಸ್ಥಾನಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸದಿರಲು ನಿರ್ಧರಿಸಿದೆ ಎಂದು ಇಸಿ ಹೇಳಿದೆ.

“ಸಂವಿಧಾನಾತ್ಮಕ ತುರ್ತುಸ್ಥಿತಿ ಮತ್ತು ಪಶ್ಚಿಮ ಬಂಗಾಳ ರಾಜ್ಯದ ವಿಶೇಷ ವಿನಂತಿಯನ್ನು ಪರಿಗಣಿಸಿ ಭಬನಿಪುರದಲ್ಲಿ ಉಪಚುನಾವಣೆ ನಡೆಸಲು ನಿರ್ಧರಿಸಲಾಗಿದೆ” ಎಂದು ಇಸಿ ಹೇಳಿದೆ.

ಇದನ್ನೂ ಓದಿ: ಸುವೇಂದು ಅಧಿಕಾರಿ v/s ದಿಲೀಪ್ ಘೋಷ್: ಬಂಗಾಳ ಬಿಜೆಪಿಯಲ್ಲಿ ಬಿರುಕು; ಸಮನ್ವಯಕ್ಕಿಂತ ಹೆಚ್ಚಿದ ಸಂಘರ್ಷ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights