ಕಲಬುರ್ಗಿಯಲ್ಲಿ ಕಾಂಗ್ರೆಸ್‌; ಬೆಳಗಾವಿ, ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಗೆಲುವು; ಲೆಕ್ಕಕ್ಕಿಲ್ಲ ಎಂದಾದ ಜೆಡಿಎಸ್‌!

ಪ್ರಮುಖ ಮೂರು ಮಹಾನಗರ ಪಾಲಿಕೆ ಚುನಾವಣೆಗಳ ಫಲಿತಾಂಶ ಪ್ರಕಟವಗಿದೆ. ಬೆಳಗಾವಿ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮತ್ತು ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಮತ್ತು ಕಲಬುರ್ಗಿ ಪಾಲಿಕೆಯಲ್ಲಿ ಕಾಂಗ್ರೆಸ್‌ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಅಧಿಕಾರ ಹಿಡಿಯುವ ಸಾಧ್ಯತೆ ಇದೆ.

ಬೆಳಗಾವಿ ಪಾಲಿಕೆಯ ಒಟ್ಟು 58 ವಾರ್ಡ್‌ಗಳ ಪೈಕಿ ಬಿಜೆಪಿ 35 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 10, ಎಂಇಎಸ್ 2, ಪಕ್ಷೇತರ 10 ಹಾಗೂ ಓವೈಸಿ ಅವರ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್‌ ಒಂದೂ ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿದ್ದು, ಶೂನ್ಯ ಸಾಧನೆ ಮಾಡಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಒಟ್ಟು 82 ಸ್ಥಾನಗಳಲ್ಲಿ ಬಿಜೆಪಿ 39, ಕಾಂಗ್ರೆಸ್‌ 33, ಜೆಡಿಎಸ್‌ 01, ಓವೈಸಿ ಅವರ ಎಐಎಂಐಎಂ 03 ಹಾಗೂ ಇತರರು 06 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊಹೊಮ್ಮಿದ್ದು, ಸ್ವತಂತ್ರರ ಬೆಂಬಲ ಪಡೆದು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.

ಕಲಬುರ್ಗಿ ಮಹಾನಗರ ಪಾಲಿಕೆಯ ಒಟ್ಟು 55 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ 27, ಬಿಜೆಪಿ 23, ಜೆಡಿಎಸ್‌ 04 ಮತ್ತು ಇತರರು 01 ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ತಿದೊಡ್ಡ ಪಕ್ಷವಾಗಿ ಹೊಹೊಮ್ಮಿದ್ದು, ಸ್ವತಂತ್ರರ ಬೆಂಬಲ ಪಡೆದು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.

ಇನ್ನು, ತರೀಕೆರೆ ಪುರಸಭೆಯ ಒಟ್ಟು 23 ವಾರ್ಡ್‌ಗಳ ಪೈಕಿ 22 ವಾರ್ಡುಗಳಿಗೆ ಚುನಾವಣೆ ನಡೆದಿತ್ತು. 1 ಸ್ಥಾನಕ್ಕೆ bjp ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣೆ ನಡೆದ 22 ವಾರ್ಡ್‌ಗಳಲ್ಲಿ 15 ವಾರ್ಡ್‌ಗಳನ್ನು ಗೆದ್ದಿರುವ ಕಾಂಗ್ರೆಸ್‌, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಉಳಿದಂತೆ 07 ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ ಇಲ್ಲೂ ಕಾಣೆಯಾಗಿದೆ.

ಉಳಿದಂತೆ ಹಲವು ಪಾಲಿಕೆ, ನಗರಸಭೆ, ಪುರಸಭೆಗಳಿಗೆ ಉಪಚುನಾವಣೆಗಳು ನಡೆದಿದ್ದು, ಬಹುಭಾಗಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಇದನ್ನೂ ಓದಿ: ರಾಜಸ್ಥಾನ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಜಯ; ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ!

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights