ತರೀಕೆರೆ ಪುರಸಭೆ: ಕಾಂಗ್ರೆಸ್‌ ಭರ್ಜರಿ ಗೆಲುವು; ಒಂದು ಸ್ಥಾನ ಗೆದ್ದ ಬಿಜೆಪಿಗೆ ಭಾರೀ ಮುಖಭಂಗ!

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪುರಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸಿ, ಪುರಸಭೆಯ ಅಧಿಕಾರದ ಗದ್ದುಗೆಯನ್ನು ತನ್ನದಾಗಿಸಿಕೊಂಡಿದೆ.

ಬಿಜೆಪಿ ಶಾಸಕ ಡಿ.ಎಸ್.ಸುರೇಶ್ ಅವರು ಪ್ರತಿನಿಧಿಸುವ ಕ್ಷೇತ್ರದವಾದ ತರೀಕೆರೆಯ ಪುರಸಭೆಯಲ್ಲಿ ಒಟ್ಟು 23 ವಾರ್ಡ್‌ಗಳ ಪೈಕಿ ಕಾಂಗ್ರೆಸ್‌ 15 ಸ್ಥಾನಗಳನ್ನು ಗೆದ್ದಿದೆ. ಅಲ್ಲದೆ, ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆದ್ದಿದ್ದು, ಭಾರೀ ಮುಖಭಂಗ ಅನುಭವಿಸಿದೆ. ಇದು ಬಿಜೆಪಿ ಶಾಸಕರಿಗೆ ಅವಮಾನಕರ ಎಂದು ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಪುರಸಭೆಯ 23 ವಾರ್ಡ್‌ಗಳ ಪೈಕಿ 22 ವಾರ್ಡುಗಳಿಗೆ ಚುನಾವಣೆ ನಡೆದಿತ್ತು. 1 ಸ್ಥಾನಕ್ಕೆ bjp ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣೆ ನಡೆದ 22 ವಾರ್ಡ್‌ಗಳಲ್ಲಿ 15 ವಾರ್ಡ್‌ಗಳನ್ನು ಗೆದ್ದಿರುವ ಕಾಂಗ್ರೆಸ್‌, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಉಳಿದಂತೆ 07 ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಬಿಜೆಪಿ ಭರ್ಜರಿ ಜಯ; ಮೊದಲ ಬಾರಿಗೆ ಅಧಿಕಾರ ಹಿಡಿದ ಕೇಸರಿ ಪಡೆ!

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭದ್ರಕೋಟೆಯಾಗಿರುವ ತರೀಕೆರೆ ಕ್ಷೇತ್ರದಲ್ಲಿ ಪುರಸಭೆಯಲ್ಲಿ ಮಾತ್ರ ಅಧಿಕಾರ ಹಿಡಿಯಲು ಬಿಜೆಪಿಗೆ ಇದೂವೆರೆಗೂ ಸಾಧ್ಯವಾಗಿಲ್ಲ.

ಈ ಬಾರಿಯಾದರೂ ಪುರಸಭೆ ಅಧಿಕಾರ ಹಿಡಿಯಲು ಬಿಜೆಪಿ ಸರ್ವಪ್ರಯತ್ನ ನಡೆಸಿತ್ತು. ಆದರೆ, ಅದೂ ಫಲಿಸಿಲ್ಲ. ಅಲ್ಲದೆ, ಒಂದೇ ಒಂದು ಸ್ಥಾನವನ್ನು ಗೆದ್ದು ಬಿಜೆಪಿ ಮುಖಂಡರು ಮುಖಭಂಗ ಅನುಭವಿಸುವಂತಾಗಿದೆ.

ಇದನ್ನೂ ಓದಿ: ಮೈಸೂರು – ದಾಂಡೇಲಿ ಉಪಚುನಾವಣೆ; ಕಾಂಗ್ರೆಸ್‌ಗೆ ಜಯ; ಬಿಜೆಪಿ-ಜೆಡಿಎಸ್‌ಗೆ ಮುಖಭಂಗ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.