ಪುಣೆಯಲ್ಲಿ ಹದಿಹರೆಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಬಂಧಿತರ ಸಂಖ್ಯೆ 14 ಕ್ಕೇರಿಕೆ!

ಪುಣೆಯಲ್ಲಿ ಹದಿಹರೆಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 14 ಕ್ಕೇರಿಕೆಯಾಗಿದೆ.

ಪುಣೆಯಲ್ಲಿ ಹದಿಹರೆಯದ ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಇನ್ನೂ ಆರು ಜನರನ್ನು ಬಂಧಿಸಲಾಗಿದ್ದು, ಅಪರಾಧದಲ್ಲಿ ಒಟ್ಟು ಬಂಧಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಆಗಸ್ಟ್ 31 ರಂದು ಸ್ನೇಹಿತನನ್ನು ಭೇಟಿಯಾಗಲು ರೈಲು ಹತ್ತಲು ಪುಣೆ ರೈಲ್ವೇ ನಿಲ್ದಾಣದಲ್ಲಿ ಕಾಯುತ್ತಿದ್ದ 14 ವರ್ಷದ ಬಾಲಕಿಗೆ ಆಟೋರಿಕ್ಷಾ ಚಾಲಕನು ಮನೆಗೆ ಬಿಡುವ ನೆಪದಲ್ಲಿ ತನ್ನ ಸ್ನೇತರನ್ನು ಕರೆಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದನು.

ಆಟೋ ಚಾಲಕ ಮತ್ತು ಆತನ ಅನೇಕ ಸಹಚರರು, ಆಟೋ-ರಿಕ್ಷಾ ಚಾಲಕರು ಮತ್ತು ನಾಲ್ಕನೇ ದರ್ಜೆಯ ರೈಲ್ವೆ ಸಿಬ್ಬಂದಿ ಸೇರಿದಂತೆ ನಗರದ ಹಲವೆಡೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಕರಣದಲ್ಲಿ ಹದಿಹರೆಯದ ಹುಡುಗಿಯ ಪರಿಚಯಸ್ಥರನ್ನು ಒಳಗೊಂಡಂತೆ ಆರು ಜನರನ್ನು ಬಂಧಿಸಲಾಗಿದೆ. ಸೋಮವಾರ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿಯಲ್ಲಿ ನಾವು ಎಂಟು ಜನರನ್ನು ಬಂಧಿಸಿದ್ದೆವು. ಈ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ “ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

Spread the love

Leave a Reply

Your email address will not be published. Required fields are marked *