ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಅವರ ತಾಯಿ ನಿಧನ..!

ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಬುಧವಾರ ನಿಧನರಾದರು.

ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರುಣಾ ಭಾಟಿಯಾ ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಬೆಳಿಗ್ಗೆ ಟ್ವೀಟ್ ನಲ್ಲಿ ನಟ ತನ್ನ ತಾಯಿಗೆ ಸಂತಾಪ ಸೂಚಿಸಿದ್ದಾರೆ: “ಅವಳು ನನ್ನ ಮೂಲ. ಇಂದು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ತಾಯಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ನನ್ನ ತಂದೆಯೊಂದಿಗೆ ಬೇರೆ ಜಗತ್ತಿನಲ್ಲಿ ಜೊತೆಯಾಗಿದ್ದಾರೆ” ಎಂದು ಬರೆದಿದ್ದಾರೆ.

ಯುಕೆಯಲ್ಲಿದ್ದ ಅಕ್ಷಯ್ ಕುಮಾರ್ ಈ ವಾರದ ಆರಂಭದಲ್ಲಿ ತನ್ನ ತಾಯಿಯೊಂದಿಗೆ ಇರಲು ಮುಂಬೈಗೆ ಮರಳಿದ್ದರು. ಸೋಮವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅಕ್ಷಯ್ ಮಂಗಳವಾರ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತನ್ನ ತಾಯಿಯ ಆರೋಗ್ಯದ ಬಗ್ಗೆ ತಿಳಿಸಿ ಪ್ರಾರ್ಥನೆಗಾಗಿ ಮನವಿ ಮಾಡಿಕೊಂಡು ಬರೆದಿದ್ದರು.ಅರುಣಾ ಭಾಟಿಯಾ ನಿಧನಕ್ಕೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

ಈ ವರ್ಷದ ಆರಂಭದಲ್ಲಿ ತಾಯಂದಿರ ದಿನಕ್ಕೆ ಅಕ್ಷಯ್ ಕುಮಾರ್ ಇನ್‌ಸ್ಟಾಗ್ರಾಮ್‌ನಲ್ಲಿ ಈ ಪೋಸ್ಟ್ ಮೂಲಕ ತನ್ನ ತಾಯಿಗೆ ಶುಭ ಹಾರೈಸಿದ್ದರು:

ಅಕ್ಷಯ್ ಕುಮಾರ್ ಈ ಹಿಂದೆ ಬೆಲ್ ಬಾಟಮ್ ನಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಸೂರ್ಯವಂಶಿ, ರಕ್ಷಾ ಬಂಧನ, ರಾಮ ಸೇತು, ಬಚ್ಚನ್ ಪಾಂಡೆ ಮತ್ತು ಅತ್ರಂಗಿ ರೇ ಸೇರಿದಂತೆ ಒಂದೆರಡು ಚಿತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights