ಇಂಡೋನೇಷಿಯಾ ಜೈಲಿನಲ್ಲಿ ಅಗ್ನಿ ಅವಘಡ : 40 ಜನ ದಾರುಣ ಸಾವು!

ಇಂಡೋನೇಷಿಯಾದ ಜೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 40 ಜನ ದಾರುಣ ಸಾವನ್ನಪ್ಪಿದ್ದಾರೆ.

ಇಂಡಿಯನ್ ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ತಂಗೇರಂಗ್ ನ ಜೈಲಿನಲ್ಲಿ ಇಂದು (ಸೆಪ್ಟೆಂಬರ್ 8) ಮುಂಜಾನೆ ಅಗ್ನಿ ಅವಘಡ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ತಂಗೇರಂಗ್ ಜೈಲಿನ ಬ್ಲಾಕ್ ಸಿ ನಲ್ಲಿ 1 ರಿಂದ 2 ಗಂಟೆಯ ಸುಮಾರಿಗೆ ಹೊತ್ತಿಕೊಂಡ ಬೆಂಕಿಯನ್ನು ಅಗ್ನಿಶಾಮಕ ದಳ ನಂದಿಸಿದೆ. ಕೈದಿಗಳನ್ನು ಬೇರೆಡೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.  ತನಿಖೆ ಮಾಡಲಾಗುತ್ತಿದೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ವಿಭಾಗದ ವಕ್ತಾರ ರಿಕಾ ಅಪ್ರಿಯಂತಿ ಹೇಳಿದರು.

ಮಾದಕದ್ರವ್ಯ-ಸಂಬಂಧಿತ ಅಪರಾಧಗಳಿಗಾಗಿ ಬಂಧಿಸಲಾದ 122 ಕೈದಿಗಳನ್ನು ಈ ಬ್ಲಾಕ್ ನಲ್ಲಿ ಇರಿಸಲಾಗಿತ್ತು. ಆದರೆ ಘಟನೆ ವೇಳೆ ಎಷ್ಟು ಜನರು ಸ್ಥಳದಲ್ಲಿ ಇದ್ದರು ಎನ್ನುವ ಬಗ್ಗೆ ಅವರು ಮಾಹಿತಿ ನೀಡಿಲ್ಲ.

ಜಕಾರ್ತಾ ಬಳಿಯ ಕೈಗಾರಿಕಾ ಮತ್ತು ಉತ್ಪಾದನಾ ಕೇಂದ್ರವಾದ ತಂಗೇರಾಂಗ್‌ನಲ್ಲಿರುವ ಜೈಲಿನಲ್ಲಿ 2,000 ಕ್ಕಿಂತ ಹೆಚ್ಚು ಕೈದಿಗಳು ಇದ್ದಾರೆ. ಸರ್ಕಾರದ ಮಾಹಿತಿಯ ಪ್ರಕಾರ ಈ ಕೈದಿಗಳ ಸಂಖ್ಯೆ ಜೈಲಿನ ಸಾಮಾರ್ಥ್ಯಕ್ಕಿಂತಲೂ ಹೆಚ್ಚಾಗಿದೆ.

ಅಗ್ನಿಶಾಮಕ ದಳದವರು ಕಟ್ಟಡದ ಮೇಲ್ಭಾಗದಿಂದ ಬೃಹತ್ ಜ್ವಾಲೆಗಳನ್ನು ನಂದಿಸಲು ಪ್ರಯತ್ನಿಸುತ್ತಿರುವ ದೃಶ್ಯಗಳು ಹೊರಬಂದಿವೆ. ಘಟನೆಯಲ್ಲಿ 41 ಜನರು ಸಾವನ್ನಪ್ಪಿದ್ದಾರೆ ಮತ್ತು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಾಥಮಿಕ ವರದಿಯಿಂದ ಇದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿರಬಹುದು ಎಂದು ಪೊಲೀಸ್ ವಕ್ತಾರ ಯೂಸ್ರಿ ಯೂನಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ. 73 ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights