ಕಲಬುರಗಿ ಪಾಲಿಕೆಯಲ್ಲಿ ಮೇಯರ್ ಪಟ್ಟಕ್ಕಾಗಿ ಜೆಡಿಎಸ್ ಹೊಸ ತಂತ್ರ..!
ಕಲಬುರಗಿ ಪಾಲಿಕೆಯಲ್ಲಿ ಮೇಯರ್ ಪಟ್ಟಕ್ಕಾಗಿ ಜೆಡಿಎಸ್ ಹೊಸ ತಂತ್ರ ರೂಪಿಸಿದೆ. ಕಲಬುರಗಿ ಪಾಲಿಕೆಯಲ್ಲಿ ಮೈತ್ರಿಗಾಗಿ ಭಾರೀ ಸರ್ಕಸ್ ನಡೆಯುತ್ತಿದ್ದು ಮೇಯರ್ ಖರ್ಚಿ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ.
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್ ಹೊಸ ರಾಜಕೀಯ ದಾಳವನ್ನು ಉರುಳಿಸಿದೆ. ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮನವೊಲಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಯತ್ನದ ಮಧ್ಯೆ ಜೆಡಿಎಸ್ ಮೇಯರ್ ಸ್ಥಾನಕ್ಕಾಗಿ ಪಟ್ಟು ಹಿಡಿದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಯಾರೇ ಮೈತ್ರಿ ಮಾಡಿಕೊಂಡರೂ ತಮಗೆ ಮೇಯರ್ ಪಟ್ಟ ಬೇಕು ಎಂದು ಬೇಡಿಕೆ ಇಟ್ಟಿದೆ. ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ನೀವು ಬೆಂಬಲ ಕೊಡಿ ನಾವು ಮೇಯರ್ ಸ್ಥಾನ ಅಲಂಕರಿಸುವುತ್ತೇವೆ ಎಂದು ಜೆಡಿಎಸ್ ಪಟ್ಟು ಹಿಡಿದಿದೆ. ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಡುವವರಿಗೆ ಬೆಂಬಲ ಸೂಚಿಸುವುದಾಗಿ ಹೇಳಿದೆ. ಇಂದು ಸಂಜೆ ವೇಳೆಗೆ ಅಂತಿಮ ತೀರ್ಮಾನ ಹೊರ ಬೀಳಲು ಸಾಧ್ಯತೆ ಇದೆ.
ಬಿಜೆಪಿ ಮತ್ತು ಕಾಂಗ್ರೆಸ್ ಗೆ ಷರತ್ತು ವಿಧಿಸಿರುವ ಜೆಡಿಎಸ್ ಮೇಯರ್ ಪಟ್ಟ ಸೇರಿದಂತೆ ಪ್ರಮುಖ ಸ್ಥಾಯಿ ಸಮಿತಿಗಳ ಸ್ಥಾನ ನೀಡಬೇಕು ಎಂಬ ಹೇಳುತ್ತಿದೆ. ಇದಕ್ಕೆ ಯಾವ ಪಕ್ಷ ಒಪ್ಪುತ್ತದೆಯೋ ಆ ಪಕ್ಷಕ್ಕೆ ಬೆಂಬಲ ಸೂಚಿಸುವುದಾಗಿ ಜೆಡಿಎಸ್ ಕಾರ್ಪೋರೇಟರ್ ಗಳು ತಿಳಿಸಿದ್ದಾರೆ.