ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗ್ತಾರೆ – ಸಿಎಂ ವಿಶ್ವಾಸ..!

ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಬೆಂಗೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,” ಕಲಬುರಗಿ ಮೇಯರ್ ಬಿಜೆಪಿಯವರೇ ಆಗ್ತಾರೆ. ವಿಶ್ವಾಸ ಇಡಿ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಿರಂತರ ಸಂಪರ್ಕದಲ್ಲಿದೆ. ಎಲ್ಲವೂ ಪ್ರಾರಂಭಿಕ ಹಂತದಲ್ಲಿ ನಡೆದಿರುವ ಮಾತುಕತೆ ಇದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಭದ್ರಕೋಟೆ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಗೆ ಟಕ್ಕರ್ ಕೊಟ್ಟಿದೆ.  ಪಾಲಿಕೆ ಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು ಒಟ್ಟು 55 ವಾರ್ಡ್ ಗಳ ಪೈಕಿ 27 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ 23 ವಾರ್ಡ್ ಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಕಠಿಣ ಪೈಪೋಟಿ ನೀಡಿದೆ.

ಇನ್ನು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್ ಕಿಂಗ್ ಮೇಕರ್ ಆಗಿದ್ದು ತೆನೆ ಯಾವ ಪಕ್ಷದ ಕೈಯಿಡಿಯುತ್ತದೆಯೋ ಆ ಪಕ್ಷಕ್ಕೆ ಮೇಯರ್ ಪಟ್ಟ ಸಿಗಲಿದೆ. ಇನ್ನು ಓರ್ವ ಪಕ್ಷೇತ್ತರ ಅಭ್ಯರ್ಥಿ ಕಲಬುರಗಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಇಲ್ಲಿ ಮೇಯರ್ ಆಯ್ಕೆಗೆ 28 ಸದಸ್ಯರ ಬೆಂಬಲ ಬೇಕಿದ್ದು, ಕಾಂಗ್ರೆಸ್ ಗೆ ಏಕೈಕ ಪಕ್ಷೇತರ ಸದಸ್ಯನ ಬೆಂಬಲ ಸಿಕ್ಕರೂ ಸಾಕು, ಅಧಿಕಾರ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಜೆಡಿಯೂನ ನಾಲ್ವರು ಹಾಗೂ ಓರ್ವ ಪಕ್ಷೇತ್ತರ ಅಭ್ಯರ್ಥಿ ಬಿಜೆಪಿಗೆ ಬೆಂಬಲ ನೀಡಿದರೆ ಬಿಜೆಪಿ ಅಧಿಕಾರ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಮನವೊಲಿಸಿ ಮೇಯರ್ ಪಟ್ಟ ಅಲಂಕರಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights