ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ರಾಡ್ ಹಾಕಿದ ಕಾಮುಕರು!
ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ರಾಡ್ ಹಾಕಿದ ಘನಘೋರ ಘಟನೆ ಮುಂಬೈ ನಲ್ಲಿ ನಡೆದಿದ್ದು ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಮುಂಬೈನ ಸಾಕಿ ನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. 30 ರ ಆಸುಪಾಸಿನ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆಕೆಯು ರಾಡ್ ನಿಂದ ಹಲ್ಲೆ ನಡೆಸಿದ್ದಾನೆ. ಈ ಸಮಯದಲ್ಲಿ ಆರೋಪಿ ಆಕೆಯ ಖಾಸಗಿ ಭಾಗಗಳಲ್ಲಿ ರಾಡ್ ಅನ್ನು ಸೇರಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ.
ಅಪರಾಧದಲ್ಲಿ ಹೆಚ್ಚಿನ ಜನರು ಭಾಗಿಯಾಗಿರಬಹುದು ಎಂದು ಶಂಕಿಸಿರುವ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಡಿಸಿಪಿ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ.